ಜಿಲ್ಲಾ ಸುದ್ದಿದಾವಣಗೆರೆ

ಚನ್ನಗಿರಿಯ ನವೋದಯ ಶಾಲೆಯ ನಾಲ್ವರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢ..!

ದಾವಣಗೆರೆ: ಚನ್ನಗಿರಿ ತಾಲೂಕಿನ‌ ನವೋದಯ ಶಾಲೆಯ ನಾಲ್ವರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಗಂಟಲು ಮಾದರಿ ಪಡೆಯಲಾಗಿದ್ದು, ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.

ಜಿಲ್ಲೆಯ ಶಾಲಾ, ಕಾಲೇಜು, ನರ್ಸಿಂಗ್, ಅರೆ ವೈದ್ಯಕೀಯ ಸೇರಿದಂತೆ ಇತರೆ ಕೋರ್ಸ್ ಗಳಲ್ಲಿ ಅಭ್ಯಾಸ ಮಾಡುತ್ತಿರುವ 4882 ಮಂದಿಯ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 3667 ಮಂದಿಯ ವರದಿ ನೆಗೆಟಿವ್ ಬಂದಿದೆ. ಇಂದು 544 ಜನರ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ನಾಲ್ವರು ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ಖಚಿತವಾಗಿದೆ. ಇನ್ನು 1215 ಜನರ ಪರೀಕ್ಷಾ ವರದಿ ಬರಬೇಕಿದೆ.

ವಿದೇಶದಿಂದ ಇಲ್ಲಿಯವರೆಗೆ ಜಿಲ್ಲೆಗೆ 73 ಜನರು ಆಗಮಿಸಿದ್ದಾರೆ. ಅಪಾಯದ ಅಂಚಿನ ದೇಶಗಳಿಂದ ಬಂದವರು 29 ಮಂದಿ. ಎಲ್ಲರ ಗಂಟಲು ಮಾದರಿ ಪರೀಕ್ಷೆ ಮಾಡಲಾಗಿದ್ದು ಎಲ್ಲಾ ನೆಗೆಟಿವ್ ಬಂದಿದೆ. ಈ ದಿನದವರೆಗೆ 16 ಜನರು ಕ್ವಾರಂಟೈನ್ ಮುಗಿಸಿದ್ದರೆ, 13 ಜನರು ಕ್ವಾರಂಟೈನ್ ನಲ್ಲಿ ಇದ್ದಾರೆ.

ಶಾಲೆಗೆ ಭಾನುವಾರವಾದ ಕಾರಣ ಇಂದು ರಜೆ ಇದೆ. ನಾಳೆಯ ಹೊತ್ತಿಗೆ ಪರೀಕ್ಷಾ ವರದಿ ಕೈಸೇರುವ ಸಾಧ್ಯತೆ ಇದ್ದು, ಶಾಲೆಯ ಸೀಲ್ ಡೌನ್ ಮಾಡಬೇಕೇ ಬೇಡವೋ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಶಾಲೆಯನ್ನು ಸ್ಯಾನಿಟೈಸ್ ಮೂಲಕ ಸ್ವಚ್ಛಗೊಳಿಸಲಾಗಿದೆ. ಸೋಂಕಿತ ವಿದ್ಯಾರ್ಥಿಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ನಿಗಾ ಇಡಲಾಗಿದೆ. ವಿದ್ಯಾರ್ಥಿಗಳ ಟ್ರಾವೆಲ್ ಹಿಸ್ಟರಿ ಗೊತ್ತಾಗಿಲ್ಲ.

Spread the love

Related Articles

Leave a Reply

Your email address will not be published. Required fields are marked *

Back to top button