ಚಿಕ್ಕಮಗಳೂರುಜಿಲ್ಲಾ ಸುದ್ದಿ
ಬೈಕ್ ನಲ್ಲಿ ಗಾಂಜಾ ಸಾಗಾಟ; ಇಬ್ಬರ ಸೆರೆ

ಚಿಕ್ಕಮಗಳೂರು: ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಪ್ಪ ಪೊಲೀಸರು ಸೆರೆಹಿಡಿದಿದ್ದು, 750ಗ್ರಾಂ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಕೊಪ್ಪ ತಾಲೂಕಿನ ಹರಿಹರಪುರ ಪಟ್ಟಣದ ಸಂತೋಷ್ ಮತ್ತು ನೌಶಾದ್ ಎಂಬಿಬ್ಬರು ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹರಿಹರಪುರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಗಾಂಜಾವನ್ನು ಇವರಿಗೆ ಯಾರು ಪೂರೈಕೆ ಮಾಡಿದ್ದರು ಹಾಗೂ ಯಾರಿಗೆ ಮಾರಾಟ ಮಾಡುತ್ತಿದ್ದರು ಎಂಬುದರ ತನಿಖೆ ನಡೆಯುತ್ತಿದೆ.




