ಜಿಲ್ಲಾ ಸುದ್ದಿಬೆಳಗಾವಿರಾಜಕೀಯ

ಬೆಳಗಾವಿ : ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ಮೀಸಲು

ಬೆಳಗಾವಿ: ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ‌ ಸಂಬಂಧಿಸಿದಂತೆ ಮೀಸಲಾತಿ ಪ್ರಕಟಿಸಲಾಗಿದ್ದು, ಮೇಯರ್ ಸ್ಥಾನ-ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ‌ಮೀಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

23 ನೇ ಅವಧಿಗೆ ಸಂಬಂಧಿಸಿದಂತೆ ಮೀಸಲಾತಿ ನಿಗದಿಪಡಿಸಿ ಫೆಬ್ರವರಿ 11, 2021 ರ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿರುತ್ತದೆ.ಈ‌ ಮೀಸಲಾತಿಗೆ ಅನುಗುಣವಾಗಿ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ‌ಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಸದರಿ ಚುನಾವಣಾ ದಿನಾಂಕವನ್ನು ನಗರಾಭಿವೃದ್ಧಿ ಇಲಾಖೆಯು ನಿಗದಿಪಡಿಸಲಿದೆ ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button