ಕಲಬುರ್ಗಿಜಿಲ್ಲಾ ಸುದ್ದಿ
ಸಾರಿಗೆ ಬಸ್ ಬೈಕ್ ಮದ್ಯೆ ಮುಖಾಮುಖಿ ಡಿಕ್ಕಿ : ಯುವಕರಿಬ್ಬರು ಸ್ಥಳದಲ್ಲಿಯೇ ಸಾವು

ಕಲಬುರ್ಗಿ: ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೆ ಬೈಕ್ ಸವಾರರಿಬ್ಬರು ದುರ್ಮರಣ ಹೊಂದಿರುವ ಘಟನೆ ಅಫಜಲಪುರ ಹೊರವಲಯದ ಹೆದ್ದಾರಿಯಲ್ಲಿ ನಡೆದಿದೆ.
ಅಫಜಲಪೂರ ತಾಲೂಕಿನ ರೇವೂರ (ಕೆ) ಗ್ರಾಮದ ಆನಂದ ಪೊಲೀಸ್‌ಪಾಟೀಲ್ (32) ಹಾಗೂ ಗೋವಿಂದ ಮ್ಯಾಕೇರಿ (31) ಮೃತರು ಎಂದು ಗುರುತಿಸಲಾಗಿದೆ.
ಕಲಬುರಗಿಯಿಂದ ಮಿರಜ್-ಸೋಲಾಪುರಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ ಎದುರಿಗೆ ಬಂದ ಬೈಕ್ ಸವಾರರ ಮದ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್ ನಲ್ಲಿದ್ದ ಕೇಲವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.




