Breaking Newsಉತ್ತರ ಕನ್ನಡಜಿಲ್ಲಾ ಸುದ್ದಿ
ಕಾರವಾರ ಬಂದರು ವಿಸ್ತರಣೆ ತಡೆ ಅರ್ಜಿ ಹೈಕೋರ್ಟ್ ನಲ್ಲಿ ವಜಾ

ಕಾರವಾರ : ಕಾರವಾರ ವಾಣಿಜ್ಯ ಬಂದರು ವಿಸ್ತರಣೆ ವಿರುದ್ಧ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಕಾರವಾರ ಬೈತಖೋಲ್ ಬಂದರು ವಿಸ್ತರಣೆಗೆ ತಡೆ ನೀಡುವಂತೆ ಕೋರಿ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಬೈತಖೋಲ್ ಬಂದರು ನಿರಾಶ್ರಿತರ ಯಾಂತ್ರೀಕೃತ
ದೋಣಿ ಮೀನುಗಾರರ ಸಹಕಾರಿ ಸಂಘ ನಿಯಮಿತ ಇವರಿಂದ ರಿಟ್ ಅರ್ಜಿ 1332/2020 ನೇದರಂತೆ ಅರ್ಜಿ ಸಲ್ಲಿಸಲಾಗಿತ್ತು.
ಹೈಕೋರ್ಟ್ ಈ ಬಗ್ಗೆ ವಿಚಾರಣೆ ಕೈಗೆತ್ತಿಕೊಂಡು ಬಂದರು ವಿಸ್ತರಣೆಗೆ ಮಧ್ಯಂತರ ತಡೆ ಆದೇಶ ನೀಡಿದೆ.ಇತ್ತೀಚೆಗಷ್ಟೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಕಾರವಾರಕ್ಕೆ ಆಗಮಿಸಿ ಸ್ಥಳ ವೀಕ್ಷಣೆ ಮಾಡಿದ್ದರು. ಈ ಹಿಂದೆ ತಾವು ಸಲ್ಲಿಸಿದ್ದ ಪರಿಸರ ಸಂಬಂಧ ಪ್ರಮಾಣ ಪತ್ರವನ್ನು ವಾಪಸ್ಸು ಪಡೆದಿದ್ದರಿಂದ ನ್ಯಾಯಾಲಯಕ್ಕೆ ಹೊಸದಾಗಿ ಪ್ರಮಾಣಪತ್ರ ಸಲ್ಲಿಸಿದ್ದರೆನ್ನಲಾಗಿದೆ.
ಇದೀಗ ರಾಜ್ಯ ಉಚ್ಛ ನ್ಯಾಯಾಲಯ ಅರ್ಜಿದಾರರ ಕೋರಿಕೆಯನ್ನು ಮಾನ್ಯ ಮಾಡದೆ ಅರ್ಜಿ ವಜಾಗೊಳಿಸಿದೆ.
