Breaking NewsLatestಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಹಿಜಾಬ್ ವಿವಾದ: ಕಟ್ಟುನಿಟ್ಟಾಗಿ ನ್ಯಾಯಾಲಯ ಆದೇಶ ಜಾರಿ ಮಾಡಿ: ಬಸವರಾಜ್​​​​​​​ ಹೊರಟ್ಟಿ

ಹುಬ್ಬಳ್ಳಿ: ಸದ್ಯ ಹಿಜಾಬ್ ವಿವಾದವು ನ್ಯಾಯಾಲಯದಲ್ಲಿದ್ದು, ನ್ಯಾಯಾಲಯದಲ್ಲಿ ಯಾವುದೇ ತೀರ್ಪು ಬಂದರೂ ಸರ್ಕಾರ ತೀರ್ಪನ್ನು ಸ್ವಾಗತಿಸಿ, ಕಟ್ಟುನಿಟ್ಟಾಗಿ ನ್ಯಾಯಾಲಯದ ಆದೇಶ ಜಾರಿ ಮಾಡಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹತ್ತನೇ ತರಗತಿವರೆಗೆ ಈಗಾಗಲೇ ಸಮವಸ್ತ್ರ ಇದ್ದು, ಆದರೆ ಕಾಲೇಜಿಗೆ ಸಮವಸ್ತ್ರ ಇಲ್ಲ. ಹಾಗಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳುವುದು ಎಂಬುದನ್ನು ಕಾದು ನೋಡಬೇಕು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಶಾಲೆಗಳಲ್ಲಿ ಯಾರೂ ಬಣ್ಣದ ಬಟ್ಟೆಗಳನ್ನು ಧರಿಸದಿರುವಂತೆ ಮಧ್ಯಂತರ ಆದೇಶ ನೀಡಿದೆ ಎಂದರು.

ನ್ಯಾಯಾಲಯದ ಅಂಗಳದಲ್ಲಿ ವಿವಾದಗಳ ಕುರಿತು ಸದನದಲ್ಲಿ ಚರ್ಚಿಸಲು ಬರುವುದಿಲ್ಲ.ಸಮವಸ್ತ್ರ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ಇರುವ ಕಾರಣ ಇದನ್ನು ಸದನದಲ್ಲಿ ಚರ್ಚೆ ಮಾಡೋಕ್ಕೆ ಬರುವುದಿಲ್ಲ. ನ್ಯಾಯಾಲಯದ ಮೆಟ್ಟಿಲು ಹತ್ತುವ ಮುಂಚೆಯೇ ಆಗಿದ್ದರೆ‌ ಚರ್ಚೆ ನಡೆಸಬಹುದಾಗಿತ್ತು. ಹಿಜಾಬ್ ವಿವಾದ ಈಗ‌ನ್ಯಾಯಾಲಯದ ಅಂಗಳದಲ್ಲಿದೆ. ಹಾಗಾಗಿ ನ್ಯಾಯಾಲಯ ತೀರ್ಪು ಕೊಟ್ಟ ನಂತರ, ಸರ್ಕಾರ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button