ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಹಿಂದಿ ಭಾಷೆ ದಿನಾಚರಣೆಗೆ ಧಾರವಾಡದಲ್ಲಿ ವಿರೋಧ: ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

ಧಾರವಾಡ: ಕೇಂದ್ರ ಸರ್ಕಾರದ ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಹಾಗೂ ಹಿಂದಿ ಭಾಷೆ ದಿನಾಚರಣೆಯನ್ನು ಹಿಂದಕ್ಕೆ ಪಡೆಯುಂತೆ‌ ಆಗ್ರಹಿಸಿ, ಧಾರವಾಡದಲ್ಲಿ ಜಯ ಕರ್ನಾಟಕ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಹಾಗೂ ಮುಖಂಡರು, ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದಿನಿಂದಲೂ ಕರ್ನಾಟಕದಲ್ಲಿ ಕೇಂದ್ರ ಸರ್ಕಾರ ಹಿಂದಿ ಭಾಷೇಯನ್ನು ಒತ್ತಾಯ ಪೂರ್ವಕವಾಗಿ ಹೇರಲು ಹುನ್ನಾರ ನಡೆಸುತ್ತಲ್ಲೇ ಬರುತ್ತಿದೆ‌. ಈಗ ಹಿಂದಿ /ಭಾಷೆ ದಿನಾಚಾರಣೆಯನ್ನು ಮಾಡಲು ನಿರ್ದೇಶನ ನೀಡುವ ಮೂಲಕ ಹಿಂದೆ ಭಾಷೆಯನ್ನು ಹೆರಲಾಗುತ್ತಿದೆ ಎಂದು ಅಕ್ರೋಶ ಹೊರ ಹಾಕಿದರು. ‌

ಅಲ್ಲದೆ ಬ್ಯಾಂಕ್‌ಗಳನ್ನು ಬಳಸಿಕೊಂಡು ರಾಜ್ಯದಲ್ಲಿ ಹಿಂದಿ ಭಾಷೆಯನ್ನು ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿದೆ. ರಾಜ್ಯದ ಕನ್ನಡ ಭಾಷೆಯನ್ನು ಹತ್ತಿಕ್ಕುವ ಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದ್ದು, ಇದು ಸರಿಯಲ್ಲ. ಕೂಡಲೇ ಬ್ಯಾಂಕ್‌ಗಳಲ್ಲಿ ಕನ್ನಡ ಭಾಷೆಯನ್ನು ಆಡಳಿತ ಭಾಷೆಯಾಗಿ ಮಾಡಬೇಕು ಹಾಗೂ ಪ್ರಸ್ತುತ ಹಿಂದಿ ಭಾಷೆ ದಿನವನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಮಾಡದಿದಲ್ಲಿ ನಮ್ಮ ಹೋರಾಟ ನಿರಂತರವಾಗಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button