Latestಜಿಲ್ಲಾ ಸುದ್ದಿರಾಜಕೀಯಹುಬ್ಬಳ್ಳಿ - ಧಾರವಾಡ

ಇಂದಿನ ಭಾರತ್ ಬಂದ್‌ಗೆ ರೈತರು ಯಾರು ಕೂಡಾ ಬೆಂಬಲ ನೀಡುವುದಿಲ್ಲ: ಸಚಿವ ಆರಗ ಜ್ಞಾನೇಂದ್ರ

ಧಾರವಾಡ : ಕೃಷಿ ಕ್ಷೇತ್ರದ ಅಭಿವೃದ್ಧಿಗೋಸ್ಕರ ಜಾರಿಗೆ ತಂದಿರುವ ಎಪಿಎಂಸಿ ಕಾಯ್ದೆ ಮತ್ತು ಕೃಷಿ ಮಸೂದೆಗಳು ರೈತರಿಗೆ ಸಾಕಷ್ಟು ಅನುಕೂಲಕರವಾಗಿದೆ. ಕೃಷಿ ಕಾಯ್ದೆಗಳ ಕುರಿತು ಈಗಾಗಲೇ ರೈತರು ಅಧ್ಯಯನ ಮಾಡಿದ್ದಾರೆ. ಹೀಗಾಗಿ ಯಾವ ರೈತರು ಇಂದಿನ ಭಾರತ್ ಬಂದ್ ಪ್ರತಿಭಟನೆಯಲ್ಲಿ ಭಾಗಿಯಾಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಂದು ರಾಜಕೀಯ ಸ್ವ-ಹಿತಾಸಕ್ತಿಗಾಗಿ ಕರೆ ನೀಡಿರುವ ಭಾರತ ಬಂದ್ ಗೆ ಯಾವ ರೈತರು ನೈತಿಕ ಬೆಂಬಲ ನೀಡಿಲ್ಲ. ರೈತರ ಕಲ್ಯಾಣಕ್ಕಾಗಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಾಗೂ ಬೊಮ್ಮಾಯಿ ನೇತೃತ್ವದ ಸರ್ಕಾರ ರೈತರಿಗಾಗಿ ಅನೇಕ ಯೋಜನೆ ಗಳನ್ನು ಜಾರಿಗೆ ತರುತ್ತಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಹ ರೈತ ಹೋರಾಟಗಳಲ್ಲಿ ಗುರುತಿಸಿಕೊಂಡೆ ನಾಯಕರಾಗಿ ಆಯ್ಕೆಯಾಗಿ, ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ನಮ್ಮ ನಾಯಕರಾದ ಬಿಎಸ್ ವೈ ಸಹ ಸರ್ಕಾರದ ಜೊತೆಗಿದ್ದಾರೆ. ಹಾಗಾಗಿ ಇಂದಿನ ಬಂದ್‌ಗೆ ಯಾರು ರೈತರು ಬೆಂಬಲ‌ ನೀಡವುದಿಲ್ಲ ಎಂದು ತಿಳಿಸಿದರು. ‌

Spread the love

Related Articles

Leave a Reply

Your email address will not be published. Required fields are marked *

Back to top button