ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಅತ್ಯಾಚಾರ ಆರೋಪ: ಇಬ್ಬರು ಅರೋಪಿಗಳ ಬಂಧನ

ಹುಬ್ಬಳ್ಳಿ: ಕುಂದಗೋಳದ ಯರಗುಪ್ಪಿ ಗ್ರಾಮದಲ್ಲಿ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಹೊರ ಜಿಲ್ಲೆಯಿಂದ ಬಂದಿದ್ದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಸಹಾಯ ಮಾಡುವ ನೆಪದಲ್ಲಿ ಯುವಕರಿಬ್ಬರು ಪುಸಲಾಯಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.

ಫೆಬ್ರವರಿ 28ರಂದು ಯವತಿಯರಿಬ್ಬರು ಹೊರ ಜಿಲ್ಲೆಯಿಂದ ನಾಪತ್ತೆಯಾಗಿ ಹುಬ್ಬಳ್ಳಿಗೆ ಬಂದಿದ್ದಾರೆ. ಹುಬ್ಬಳ್ಳಿ ದೇಶಪಾಂಡೆ ಬಳಿ ಸುತ್ತಾಡುತ್ತಿದ್ದಾಗ ಅಭಿಷೇಕ್ (27) ಹಾಗೂ ಪ್ರವೀಣ್ (25) ಎಂಬ ಯುವಕರು ಯುವತಿಯರಿಗೆ ಪರಿಚಯವಾಗಿದ್ದಾರೆ. ಬಳಿಕ ಸಲುಗೆ ಬೆಳೆಸಿಕೊಂಡು ಬಾಲಕಿಯರನ್ನು ಎರಡು ದಿನಗಳ ಕಾಲ ಗದಗ, ಹಾವೇರಿಯ ಪಾರ್ಕ್ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸುತ್ತಾಡಿಸಿ ಮೂರನೇ ದಿನ ಅತ್ಯಾಚಾರ ಮಾಡಿದ್ದಾಗಿ ಯುವತಿಯರು ಆರೋಪಿಸಿದ್ದಾರೆ.

ಘಟನೆ ಬಳಿಕ ಸಂತ್ರಸ್ತೆ ಆರೋಪಿಯ ಮೊಬೈಲ್ ಫೋನ್ ಬಳಸಿ ತನ್ನ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾಳೆ. ಕುಟುಂಬಸ್ಥರು ಹುಬ್ಬಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡ್ತಿದ್ದಂತೆ ಅಭಿಷೇಕ್ ಹಾಗೂ ಪ್ರವೀಣ ಎಸ್ಕೇಪ್ ಆಗಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಹುಬ್ಬಳಿ ಉಪನಗರ ಪೊಲೀಸರು ಬಾಲಕಿಯರನ್ನ ರಕ್ಷಿಸಿದ್ದು, ಆರೋಪಿಗಳನ್ನು ಪೋಕ್ಸೋ ಕಾಯಿದೆ ಅಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button