ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ತಹಶೀಲ್ದಾರ್ ಮೇಲಿನ ಹಲ್ಲೆ: ಪ್ರತಿಭಟನೆ

ಹುಬ್ಬಳ್ಳಿ: ಇತ್ತೀಚೆಗೆ ಹುಮನಾಬಾದ್ ತಹಶೀಲ್ದಾರ್ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಕುರ್ಚಿಗಳನ್ನು ಧ್ವಂಸಗೊಳಿಸಿ, ಕರ್ತವ್ಯ ನಿರತ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಹಾಗೂ ದುಷ್ಕರ್ಮಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ವೀರಶೈವ ಲಿಂಗಾಯತರು ಪ್ರತಿಭಟನೆ ನಡೆಸಿ‌ ಆಕ್ರೋಶ ವ್ಯಕ್ತಪಡಿಸಿದರು.

ನಗರದ ತಹಶಿಲ್ದಾರ್ ಕಚೇರಿ ಮುಂಭಾಗದಲ್ಲಿ ವೀರಶೈವ ಲಿಂಗಾಯತ ಸಮಾಜ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ತಹಶಿಲ್ದಾರ್ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.‌

ಇತ್ತಿಚೆಗೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಷ್ಟು ದಿನ ಮಾನಸಿಕ ಹಿಂಸೆ ನೀಡುತ್ತಿದ್ದ ಕೆಲವು ದುಷ್ಕರ್ಮಿಗಳು ಈಗ‌ ದೈಹಿಕವಾಗಿಯು ಹಲ್ಲೆ ನಡೆಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ, ಹಾಗಾಗಿ ಹುಮನಾಬಾದ್ ತಹಶಿಲ್ದಾರ್ ಪ್ರದೀಪ್‌ಕುಮಾರ ಹಿರೇಮಠ ಅವರ ಮೇಲೆ ಹಲ್ಲೆ‌ ನಡೆಸಿದ ದುಷ್ಕರ್ಮಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಅಗ್ರಹಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button