ಹುಬ್ಬಳ್ಳಿ - ಧಾರವಾಡ

‘ಆಮ್​ ಆದ್ಮಿ ಪಕ್ಷ ಟಿಕೆಟ್ ಕೊಡುವುದು ಬ್ಯಾಂಕ್‌ ಬ್ಯಾಲನ್ಸ್ ನೋಡಿ ಅಲ್ಲ’ 

ಧಾರವಾಡ: ಇತರ ಪಕ್ಷಗಳ ಹಾಗೆ ನಾವು ಬ್ಯಾಂಕ್ ಬ್ಯಾಲೆನ್ಸ್ ನೋಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಿಲ್ಲ. ಸಮರ್ಥ ಅಭ್ಯರ್ಥಿಗಳನ್ನು ಚುನಾವಣೆ ಕಣಕ್ಕೆ ಇಳಿಸುತ್ತೆವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ತಿಳಿಸಿದರು‌.

ಹುಬ್ಬಳ್ಳಿಯ ಪ್ರೆಸ್ ಕ್ಲಬ್‌ನಲ್ಲಿ ಮಾತನಾಡಿದ ಅವರು, ಜನರು ಸಾಂಪ್ರದಾಯಿಕ ಪಕ್ಷಗಳ ಅಧಿಕಾರ ನೋಡಿ ಬೇಸತ್ತು ಹೋಗಿದ್ದು, ಪರ್ಯಾಯ ಪ್ರಬಲ ಪಕ್ಷಕ್ಕಾಗಿ ಕಾಯತ್ತಾ ಇದ್ದಾರೆ. ಆ ಸ್ಥಾನವನ್ನು ಆಮ್ ಆದ್ಮಿ ಪಕ್ಷ ತುಂಲಿದ್ದು, ಈಗಾಗಲೇ 82 ವಾರ್ಡ್ ಗಳಲ್ಲೂ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಹುಬ್ಬಳ್ಳಿ ಧಾರವಾಡ ಮಹಾನಗರಗಳನ್ನು ವಿಶ್ವದರ್ಜೆ ಮಾದರಿಯ ನಗರಗಳನ್ನಾಗಿ ಮಾಡುವ ಪರಿಕಲ್ಪನೆಯೊಂದಿಗೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ದ್ದು, ಜನರಿಗೆ ಉತ್ತಮ, ಸದೃಢ ನಾಯಕನನ್ನು ಚುನಾವಣೆಗೆ ನಿಲ್ಲಿಸಿ ಗೆಲುವು ಸಾಧಿಸಿ ನಗರವನ್ನು ವಿಶ್ವದರ್ಜೆಯ ಮಾದರಿ ಮಹಾನಗಳನ್ನಾಗಿ ಮಾಡಲಾಗುವುದು ಎಂದರು.

ಈ ಬಾರಿಯ ಪಾಲಿಕೆ ಚುನಾವಣೆಯಲ್ಲಿ ಎಲ್ಲ ವಾರ್ಡ್​ಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದ್ದು, ಆಮ್ ಆದ್ಮಿ ಪಕ್ಷಕ್ಕೆ ಈ ಚುನಾವಣೆ ಐತಿಹಾಸಿಕ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button