ಹುಬ್ಬಳ್ಳಿ - ಧಾರವಾಡ

ಧಾರವಾಡದಲ್ಲಿ ರಂಗೇರಿದ ಪರಿಷತ್ ಫೈಟ್; ಕಾಂಗ್ರೆಸ್, ಬಿಜೆಪಿ‌ ಅಭ್ಯರ್ಥಿಗಳಿಂದ‌ ನಾಮಪತ್ರ ಸಲ್ಲಿಕೆಗೆ ಸಿದ್ಧತೆ

ಧಾರವಾಡ: ಅವಿಭಜಿತ ಧಾರವಾಡ ಜಿಲ್ಲೆಯ ಎರಡು ವಿಧಾನ ಪರಿಷತ್ ಸ್ಥಾನದ ಚುನಾವಣೆಯ ಕಾವು ಈಗ‌‌ ರಂಗು ಪಡೆದುಕೊಳ್ಳುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳುಗಳು ಈಗಾಗಲೇ ತಮ್ಮ ತಮ್ಮ ಪಕ್ಷದ ವತಿಯಿಂದ ಅಧಿಕೃತ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಿದ್ದು, ಇಂದು ಎರಡು ಪಕ್ಷದ ಅಭ್ಯರ್ಥಿಗಳು‌ ತಮ್ಮ ತಮ್ಮ ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆಯ ಮೂಲಕ ಆಗಮಿಸಿ ನಾಮ ಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬಿಜೆಪಿಯಿಂದ ಮತ್ತೊಂದು ಬಾರಿ ಆಯ್ಕೆ ಬಯಸಿ ಮಾಜಿ ಸಿಎಂ ಜಗದೀಶ ಶೆಟ್ಟರ ಸಹೋದರ ಪ್ರದೀಪ್‌ ಶೆಟ್ಟರವರು ಪರಿಷತ್‌ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಇನ್ನೂ ಕಾಂಗ್ರೆಸ್‌ ಪಕ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ ಅವರಿಗೆ ಟಿಕೆಟ್ ನೀಡಲಾಗಿದ್ದು, ಇಂದು ಉಭಯ ಪಕ್ಷದ ಅಭ್ಯರ್ಥಿಗಳು ಧಾರವಾಡ ಕರ್ನಾಟಕ ಕಾಲೇಜು ಮೈದಾನದ ರಸ್ತೆಯ ಮೂಲಕ ಮೆರವಣಿಗೆ ಮೂಲಕ‌‌ ಆಗಮಿಸಿ ನಾಮ ಪತ್ರ ಸಲ್ಲಿಸಲು ತೀರ್ಮಾಣ ಮಾಡಿದ್ದಾರೆ.

ಈಗಾಗಲೇ ಎರಡು ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಕೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಾಮ ಒತ್ರ ಮೆರವಣಿಗೆಯಲ್ಲಿ ಎರಡು ಪಕ್ಷದ ಸ್ಥಳಿಯ ಶಾಸಕರು, ಹಾಗೂ ಜಿಲ್ಲಾಧ್ಯಕ್ಷರಿಗೆ ಅಹ್ವಾನ ನೀಡಲಾಗಿದೆ. ಇದರ ಜೊತೆಗೆ ಪಕ್ಷದ ಕಾರ್ಯಕರ್ತರಿಗೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂದೇಶಗಳನ್ನು ಕಳುಹಿಸಲಾಗಿದೆ.

ಧಾರವಾಡ ಜಿಲ್ಲಾಧಿಕಾರಿ ಆವರಣದಲ್ಲಿ ಇಂದು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಬಾವುಟಗಳ ಕಾಣಿಸಿಕೊಳ್ಳಲ್ಲಿವೆ. ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರವರು ಈ ಹಿಂದೆ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು, ಈಗ ಮತ್ತೊಂದು ಬಾರಿ ಆಯ್ಕೆ ಬಯಸಿ ಪರಿಷತ್ ಅಖಾಡದಲ್ಲಿದ್ದಾರೆ. ಇನ್ನೂ ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಅಲ್ಪ ಸಂಖ್ಯಾಂತ ಅಭ್ಯರ್ಥಿ ಸಲೀಂ ಅಹ್ಮದರನ್ನು ಕಣಕ್ಕೆ ಇಳಿಸಲಾಗಿದೆ. ಈ ಹಿಂದೆ ಕಾಂಗ್ರೆಸ್‌ನಿಂದ ಶ್ರೀನಿವಾಸ ಮಾನೆಯವರು ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಆದರೆ ಶ್ರೀನಿವಾಸ ಮಾನೆಯವರು ಪ್ರಸ್ತುತ ಹಾನಗಲ್ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಮಾನೆಯವರಿಂದ ತೆರವಾದ ಸ್ಥಾನಕ್ಕೆ ಈಗ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದರನ್ನು ಪರಿಷತ್ ಕಣಕ್ಕೆ ಇಳಿಸಲಾಗಿದೆ.

ಧಾರವಾಡ ಜಿಲ್ಲೆಯ ಎರಡು ವಿಧಾನ ಪರಿಷತ್ ಸ್ಥಾನಗಳು ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದ್ದು. ಇಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಈ ಎರಡು ಸ್ಥಾನಕ್ಕೆ ಮತದಾನ ಮಾಡುವ ಮೂಲಕ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button