ಹುಬ್ಬಳ್ಳಿ - ಧಾರವಾಡ

ಹು-ಧಾ ಪಾಲಿಕೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಗುರುವಾರ ಬಿಡುಗಡೆ: ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಪ್ರತ್ಯೇಕವಾಗಿ ಸಿದ್ಧತೆ ಇಲ್ಲ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸಂಘಟನಾತ್ಮಕವಾದ ಪಕ್ಷ ಆಗಿರುವ ಹಿನ್ನೆಲೆಯಲ್ಲಿ, ಮೊದಲಿನಿಂದಲೂ ನಮ್ಮಲ್ಲಿ ಸಿದ್ದತೆ ಇದೆ. ಬರುವ ಗುರುವಾರ ಹು-ಧಾ ಮಾಹಾನಗರ ಪಾಲಿಕೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ಹುಬ್ಬಳ್ಳಿಯ ಖಾಸಗಿ ಹೋಟೆಲಿನಲ್ಲಿ ನಡೆದ ಅವಳಿ ನಗರ ಪಾಲಿಕೆ ಚುನಾವಣೆ ಪೂರ್ವ ಸಿದ್ದತಾ ಸಭೆಗೂ‌ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಸಿದ್ಧತೆ ಮಾಡಲಾಗುತ್ತಿದೆ. ವಾರ್ಡ್ ಅಧ್ಯಕ್ಷರ ಮೂಲಕ ಬರುವ ಆಕಾಂಕ್ಷಿಗಳ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದರು.

ಬಿಜೆಪಿಯಲ್ಲಿ ಟಿಕೆಟ್ ಗೆ ಅರ್ಜಿ ಪಡೆಯಲು ಶುಲ್ಕ ಪಡೆಯಲಾಗುತ್ತಿಲ್ಲ. ಕಾಂಗ್ರೆಸ್ ನಂತೆ ಅರ್ಜಿಯಿಂದ ಹಣ ಮಾಡುವ ಅನಿವಾರ್ಯತೆ ನಮ್ಮ ಪಕ್ಷಕ್ಕೆ ಇಲ್ಲ ಎಂದು ಅವರು ಟೀಕಿಸಿದರು.

Related Articles

Leave a Reply

Your email address will not be published. Required fields are marked *

Back to top button