ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಹುಬ್ಬಳ್ಳಿಯಿಂದ ಅಂತರ್ ಜಿಲ್ಲಾ ಬಸ್‌ಗಳ ಸಂಖ್ಯೆ ಹೆಚ್ಚಳ: ಪ್ರಯಾಣಿಕರ ನೀರಸ ಪ್ರತಿಕ್ರಿಯೆ

ಧಾರವಾಡ: ಕೊರೊನಾ ಮಾಹಾಮಾರಿ ಎರಡನೇ ಅಲೆಯು ಬಹುತೇಕ ನಿಯಂತ್ರಣಕ್ಕೆ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆಯನ್ನು ಮಾಡುತ್ತಿದೆ. ಈಗ 3.0 ಅನ್ ಲಾಕ್‌ನ್ನು ಇಂದಿನಿಂದ ಘೋಷಣೆ ಮಾಡಿದ್ದು, ಸಾರಿಗೆ ಬಸ್‌ಗಳಲ್ಲಿ ಶೇ. 100 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ಅಂತರ ಜಿಲ್ಲಾ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ.

ಹುಬ್ಬಳ್ಳಿ ಗ್ರಾಮಾಂತರ ಹಾಗೂ ನಗರ ಸಾರಿಗೆ ಬಸ್ ಗಳ ಸಂಖ್ಯೆಯಲ್ಲಿ ಹೆಚ್ಚಳ ಮಾಡಿದ್ದು, ಹುಬ್ಬಳ್ಳಿಯಿಂದ ಬೆಂಗಳೂರು, ದಾವಣಗೆರೆ, ಹಾವೇರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ ಹಲವೆಡೆ ಬಸ್ ಸಂಚಾರ ಆರಂಭವಾಗಿದ್ದು, ಬಹುತೇಕ ಬಸ್‌ಗಳಲ್ಲಿ ಕೇವಲ ಶೇ. 50 ರಷ್ಟು ಪ್ರಯಾಣಿಕರ ಓಡಾಟ ಕಂಡು ಬರುತ್ತಿದೆ.

ಇನ್ನೂ ಶೇ 100 ರಷ್ಟು ಆಸನ ಭರ್ತಿಗೆ ಅವಕಾಶ ಕೊಟ್ಟಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಪ್ರಯಾಣಿಕರು ಬರುತ್ತಿಲ್ಲ. ಬಹುತೇಕ ಬಸ್ ಗಳಲ್ಲಿ ಶೇಕಡಾ 50 ರಷ್ಟು ಆಸನಗಳು ಇನ್ನು ಬಾಕಿ ಉಳಿದಿದ್ದು, ಸಂಜೆಯವರೆಗೆ ಪರಿಸ್ಥಿತಿ ಹೀಗೆ ಮುಂದುವರೆದರೆ, ಅಂತರ ಜಿಲ್ಲಾ ಬಸ್ ಒಡಾಟ ಸಂಖ್ಯೆಯಲ್ಲಿ ಇಳಿಕೆ ಮಾಡಿ, ನಂತರ ಪ್ರಯಾಣಿಕರ ಬೇಡಿಕೆಗಳಿಗೆ ತಕ್ಕಂತೆ ಬಸ್‌ಗಳನ್ನು ಓಡಿಸಲು ಅಧಿಕಾರಿಗಳು ಮುಂದಾಗಬಹುದು ಎಂದು ಹೇಳಲಾಗುತ್ತಿದೆ.

Spread the love

Related Articles

Leave a Reply

Your email address will not be published. Required fields are marked *

Back to top button