ಹುಬ್ಬಳ್ಳಿ - ಧಾರವಾಡ

ಧಾರವಾಡದಲ್ಲಿ ಸಿಎಂ ಬಿಎಸ್​ವೈ ಪರ ನಿಂತ ಅಖಿಲ ಭಾರತ ವೀರಶೈವ ಮಹಾಸಭಾ

ಧಾರವಾಡ: ರಾಜ್ಯದಲ್ಲಿ ಸಿಎಂ ಬಿಎಸ್ ವೈ ಅವರು ಉತ್ತಮವಾದ ಆಡಳಿತವನ್ನು ನೀಡುತ್ತಿದ್ದಾರೆ. ಕೊರೊನಾ, ಬರಗಾಲ ಸೇರಿದಂತೆ ಉತ್ತರ ಕರ್ನಾಟಕ ಪ್ರವಾಹ ಉಂಟಾದ ಸಂದರ್ಭದಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದ್ದಾರೆ. ಈಗ ಅವರನ್ನು ಬಿಜೆಪಿ ಹೈಕಮಾಂಡ ಬದಲಾವಣೆ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಆ ನಿರ್ಧಾರವನ್ನು ಬಿಜೆಪಿ ವರಿಷ್ಠರು ಕೈ ಬಿಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಾಭಾ ಧಾರವಾಡ ಮುಖಂಡರಾದ ಗುರುರಾಜ್ ಹುಣಸಿಮರದ ಒತ್ತಾಯಿಸಿದರು.

ಈ ಕುರಿತು ಧಾರವಾಡ ಲಿಂಗಾಯತ ಭವನದಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಾಣದ ಕೈಗಳ ಮಾತುಗಳನ್ನು ಕಟ್ಟಿಕೊಂಡ, ಒಂದು ವೇಳೆ ಬಿಜೆಪಿ ವರಿಷ್ಠರು ಲಿಂಗಾಯತ ಸಮಾಜದ ಬಿಎಸ್ ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿ ಲಿಂಗಾಯತರನ್ನು ಹತ್ತಿಕುವ ಪ್ರಯತ್ನ ಮಾಡಿದಲ್ಲಿ, ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ರಾಜ್ಯದ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹೆಚ್ಚು ಪ್ರಚಾರ ಪಡೆಯುತ್ತಿದ್ದು, ಈ ವಿಚಾರ ಕುರಿತು ನಮ್ಮ ರಾಷ್ಟ್ರೀಯ ಅಧ್ಯಕ್ಷರು ಕೂಡಾ ನಾಯಕತ್ವ ಬದಲಾವಣೆ ಮಾಡದಂತೆ ಒತ್ತಾಯ ಮಾಡಿದ್ದಾರೆ. ವೀರಶೈವ ಲಿಂಗಾಯತ ಸಮಾಜದಿಂದ ಅತ್ಯುತ್ತಮ ನಾಯಕರಾಗಿ ಬಿಎಸ್ ವೈ ಅವರು ನಿಂತಿದ್ದಾರೆ. ರಾಜ್ಯದಲ್ಲಿ ಹಲವು ಸಂಕಷ್ಟಗಳ ನಡುವೆಯೂ ಉತ್ತಮ ಆಡಳಿತವನ್ನು ನೀಡಿದ್ದಾರೆ. ಅಂತಹ ನಾಯಕನನ್ನು ಏಕಾಏಕಿ ಬದಲಾವಣೆ ಮಾಡಿದೆ ಆದಲ್ಲಿ, ಬಿಜೆಪಿಯನ್ನು ರಾಜ್ಯದಲ್ಲಿ ಲಿಂಗಾಯತ ಸಮಾಜ ಕ್ಷಮಿಸುವುದಿಲ್ಲಾ ಎಂದು ಕೇಂದ್ರ ಬಿಜೆಪಿ ನಾಯಕರನ್ನು ಎಚ್ಚರಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button