ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯ ಬಗ್ಗೆ ಬಹಿರಂಗ ಘೋಷಣೆ ಮಾಡಿದ ಜೆಡಿಎಸ್ ಶಾಸಕ

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಕೆ ಶ್ರೀನಿವಾಸಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆಯ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದಾರೆ.
ಇತ್ತೀಚೆಗೆ ಬಹಿರಂಗವಾಗಿ ಜೆಡಿಎಸ್ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದ ಶ್ರೀನಿವಾಸಗೌಡರ ನಡೆಗೆ ಜೆಡಿಎಸ್ ವರಿಷ್ಟರಾದ ದೇವೇಗೌಡರು ಅವರ ವಿರುದ್ದ ಶಿಸ್ತು ಕ್ರಮ ತೆಗೆದುಕೊಳ್ಳಲು ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಸೂಚಿಸಿದ್ದರು. ದೇವೇಗೌಡರು ಬಹಿರಂಗವಾಗಿ ಶ್ರೀನಿವಾಸಗೌಡರ ಮೇಲೆ ಶಿಸ್ತು ಕ್ರಮಕ್ಕೆ ಮುಂದಾಗುತ್ತಿದ್ದಂತೆ ಶ್ರೀನಿವಾಸಗೌಡರು ನೇರವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿ ಮಾಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯ ಬಗ್ಗೆ ಚರ್ಚಿಸಿದ್ದರು.
ಇಂದು ಕೋಲಾರದಲ್ಲಿ ಬಹಿರಂಗವಾಗಿ ಜೆಡಿಎಸ್ ವರಿಷ್ಠರ ವಿರುದ್ದ ಏಕವಚನದಲ್ಲಿಯೇ ಹರಿಹಾಯ್ದ ಶಾಸಕ ಶ್ರೀನಿವಾಸಗೌಡ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ನನ್ನ ಮಗ ಕಾಂಗ್ರೆಸ್ ಪಕ್ಷದಿಂದಲೇ ಹೋಳೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿಕೊಂಡಿದ್ದಾರೆ.




