Breaking NewsLatestಜಿಲ್ಲಾ ಸುದ್ದಿಮೈಸೂರುರಾಜಕೀಯ

ಐಟಿ, ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಹೇಳುವುದು ಸರಿಯಲ್ಲ: ಸಚಿವ ಮಾಧುಸ್ವಾಮಿ

ಮೈಸೂರು: ಕಾಂಗ್ರೆಸ್‌ನವರು ತಮ್ಮ ಆಡಳಿತ ಕಾಲದಲ್ಲಿ ಐಟಿ-ಇಡಿ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡಂತೆಯೇ ಈಗಲೂ ಆಗುತ್ತಿದೆ ಎಂದು ತಪ್ಪಾಗಿ ಭಾವಿಸಿದ್ದಾರೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಟೀಕಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಜಮೀರ್‌ಗೆ ಬೇಕಾದಷ್ಟು ವ್ಯವಹಾರ ಇದೆ. ಅವರು ಬ್ಯೂಸಿನೆಸ್ ಕ್ಲಾಸ್ ಜನ. ಅವರೇನೂ ನನ್ನ ರೀತಿ ಹಳ್ಳಿಯಲ್ಲಿ ಇರುವ ಶಾಸಕರಲ್ಲ. ಐಟಿ, ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಹೇಳುವುದು ಸರಿಯಲ್ಲ. ಅದರಲ್ಲೂ ಸಿದ್ದರಾಮಯ್ಯ ಅಂತಹವರು ಹೀಗೆ ಹೇಳುವುದು ತಪ್ಪು. ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ಸಹಜ ಎಂದು ಹೇಳಿದರು.

ದಾಳಿಯೆ ತಪ್ಪು ಎಂದರೇ ಹೇಗೇ ಹೇಳಿ? ಸ್ವಾಯತ್ತ ಸಂಸ್ಥೆಗಳು ಅವರ ಕೆಲಸ ಅವರು ಮಾಡಬಾರದಾ? ಇದು ರಾಜಕೀಯ ದಾಳಿಯಲ್ಲ. ಲೆಕ್ಕದ ಅನುಮಾನ ಇದ್ದಾಗ ಪರಿಶೀಲನೆಗೆ ಬಂದಿರುತ್ತಾರೆ. ಜಮೀರ್ ಲೆಕ್ಕ ಪತ್ರ ಸರಿ ಇಟ್ಟು ಕೊಂಡಿದ್ದಾರೆ ಅದನ್ನು ತೋರಿಸುತ್ತಾರೆ ಅಷ್ಟೆ. ಇದಕ್ಕೆ ಬೇರೆ ರೀತಿಯ ಬಣ್ಣ ಬೇಡ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button