ಜಿಲ್ಲಾ ಸುದ್ದಿದಾವಣಗೆರೆರಾಜ್ಯಸುದ್ದಿ
ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ರಕ್ಷಣೆ!ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ದಾವಣಗೆರೆ: ನಗರದ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತಲು ಹೋಗಿ ಜಾರಿ ಬಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ವಿಡಿಯೋ ವೈರಲ್ ಆಗಿದೆ.
ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ನಾಗರಾಜ್ ಬಿ. ಆರ್. ಅವರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ನಂಬರ್ 2 ರಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು.
ಈ ವೇಳೆ ಧಾರವಾಡದಿಂದ ಬೆಂಗಳೂರಿಗೆ ಹೋಗುತ್ತಿದ್ದ ರೈಲು ದಾವಣಗೆರೆ ರೈಲ್ವೆ ನಿಲ್ದಾಣಕ್ಕೆ ಬಂದಿತ್ತು. ಈ ವೇಳೆ ರೈಲು ಹೊರಟಿತ್ತು. ತನ್ನ ಕುಟುಂಬದವರನ್ನ ರೈಲಿಗೆ ಹತ್ತಿಸಿ ಬಳಿಕ ರೈಲು ಹತ್ತಲು ಹೋದ ಪ್ರಯಾಣಿಕರೊಬ್ಬರು ರೈಲು ಅಡಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳಬೇಕಾಗಿತ್ತು. ಆದ್ರೆ ರೈಲ್ವೆ ಪೊಲೀಸ್ ನಾಗರಾಜ್ ಅವರ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ.
ರಕ್ಷಣೆಗೊಳಗಾದ ಪ್ರಯಾಣಿಕರು ಹಾಗೂ ರೈಲ್ವೆ ಇಲಾಖೆಯ ಪೊಲೀಸ್ ನಿರೀಕ್ಷಕರು ನಾಗರಾಜ್ ಅವರನ್ನು ಅಭಿನಂದಿಸಿದ್ದಾರೆ.




