ಸಿಲಿಂಡರ್ ತಲೆ ಮೇಲೆ ಹಾಕಿ ಕೊಲೆ ಮಾಡಿದ ಆರೋಪಿಗೆ 7 ವರ್ಷ ಶಿಕ್ಷೆ

ಕಲಬುರ್ಗಿ: ಸಿಲೇಂಡರ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಆರೋಪಿಗೆ 7 ವರ್ಷ ಜೈಲು ಶಿಕ್ಷೆ ಜೊತೆಗೆ 10 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ನಿಲೇಶ ಖರತ್ ಶಿಕ್ಷೆಗೆ ಗುರಿಯಾದ ಆಪಾದಿತ. ಕಳೆದ 2017 ರಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣ ಬಳಿಯ ಹೊಟೇಲ್‌ವೊಂದಲ್ಲಿ ರಾತ್ರಿ ಮಲಗಿದ್ದ ಎಂಎಸ್‌ಕೆ ಮಿಲ್ ನಿವಾಸಿ ಶರೀಫ್ ಅನ್ನೊ ವ್ಯಕ್ತಿಯ ಮೇಲೆ ಖಾಲಿ ಸಿಲಿಂಡರ್ ನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ, ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕಲಬುರಗಿಯ ಖಾಸಗಿ ಆಸ್ಪತ್ರೆ ನಂತರ ಹೈದ್ರಾಬಾದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ.
ಈ ಕುರಿತು ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮಗ್ರ ತನಿಖೆ ನಡೆಸಿದ ಅಂದಿನ ಸರ್ಕಲ್ ಇನ್ಸಪೇಕ್ಟರ್ ನಿಲೇಶ ವಿರುದ್ಧ ನ್ಯಾಯಾಲಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಕುರಿತಾಗಿ ವಾದ ಪ್ರತಿವಾದ ಆಲಿಸಿದ ಜಿಲ್ಲಾ 3ನೇ ಸತ್ರ ನ್ಯಾಯಾಧೀಶರಾದ ಜಗದೀಶ ವಿ ಎನ್ ಅವರು ಆಪಾಧಿತನಿಗೆ 7 ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.




