ಕಲಬುರ್ಗಿಜಿಲ್ಲಾ ಸುದ್ದಿ

ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಸಚಿವ ನಿರಾಣಿ ಚಾಲನೆ

ಕಲಬುರಗಿ: ಇಂದು ರಾಜ್ಯದಾದ್ಯಂತ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ನಿರಾಣಿ ಚಾಲನೆ ನೀಡಿದರು.

ಆದರ್ಶ ನಗರದಲ್ಲಿರುವ ಆದರ್ಶ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಿದರು. ಪ್ರತಿಯೊಬ್ಬ 15 ವರ್ಷ ಮೇಲ್ಪಟ್ಟ ಮಕ್ಕಳು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಪೊಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಲು ಮುಂದೆ ಬರುವ ಮೂಲಕ ಕೋವಿಡ್ ಸೋಂಕಿನಿಂದ ಮಕ್ಕಳನ್ನು ರಕ್ಷಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್, ಶಾಸಕ ಬಸವರಾಜ ಮುತ್ತಿಮುಡ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಶಶಿಲ್ ನಮೋಶಿ, ಕರ್ನಾಟಕ ನವೀಕರಿಸಬಹುದಾದ ಇಂಧನ ನಿಯಮಿತದ ಅಧ್ಯಕ್ಷ ಚಂದು ಪಾಟೀಲ್, ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓ ಡಾ. ದಿಲೀಶ್ ಶಶಿ ಸೇರಿದಂತೆ ಅನೇಕರು ಉಪಸ್ಥೀತರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button