ಕಲಬುರ್ಗಿ
ಸ್ನೇಹಿತನ ಕೊಲೆಗೈದ ವಿಚಾರಣಾಧೀನ ಕೈದಿ ಆಸ್ಪತ್ರೆಯಿಂದ ಪರಾರಿ

ಕಲಬುರಗಿ: ಜಿಮ್ಸ್ ಆಸ್ಪತ್ರೆ ಜೈಲ್ ವಾರ್ಡ್‌ನ ಕಿಟುಕಿಯಿಂದ ಹೊರ ಜಿಗಿದು ಕಾರಾಗ್ರಹ ವಿಚಾರಣಾಧೀನ ಕೈದಿಯೋರ್ವ ಪರಾರಿಯಾಗಿದ್ದಾನೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಅಲ್ಲೂರು ಬಿ ಗ್ರಾಮದ ನಿವಾಸಿ ಸಿದ್ದಪ್ಪ ಅಲ್ಲೂರ್ (22) ಪರಾರಿಯಾದ ಕೈದಿಯಾಗಿದ್ದಾನೆ. ಎರಡು ತಿಂಗಳ ಹಿಂದೆ ತನ್ನ ಸ್ನೇಹಿತನನ್ನು ಕೊಲೆ ಮಾಡಿ ಕೇಂದ್ರ ಕಾರಾಗೃಹ ಸೇರಿದ್ದ ಸಿದ್ದಪ್ಪ, ಅಸಹಜ ವರ್ತನೆ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಜಿಮ್ಸ್ ಆಸ್ಪತ್ರೆಯ ಜೈಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು.
ಇಂದು ನಸುಕಿನ ಜಾವ ನಾಲ್ಕು ಗಂಟೆ ಸುಮಾರಿಗೆ ಸಿದ್ದಪ್ಪ ಪರಾರಿಯಾಗಿದ್ದಾನೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




