ಕಲಬುರ್ಗಿ
ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಕಾ: ಡಾ. ಶರಣಪ್ರಕಾಶ ಪಾಟೀಲ್

ಕಲಬುರಗಿ: ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಕಾ ಅಂತ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪಾಲಿಕೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಜೆಡಿಎಸ್ ವರಿಷ್ಠರೊಂದಿಗೆ ಮಾತನಾಡಿದ್ದಾರೆ. ಜ್ಯಾತ್ಯತೀತ ನಿಲುವಿನೊಂದಿಗೆ ಕಾಂಗ್ರೆಸ್ ಜೊತೆ ಜೆಡಿಎಸ್ ಕೈ ಜೊಡಿಸಲಿದೆ. ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವದು ನೂರಕ್ಕೆ ನೂರರಷ್ಟು ಪಕ್ಕಾ ಅಂತ ಹೇಳಿದರು.
ಇದೇ ವೇಳೆ ಬಿಜೆಪಿ ವಿರುದ್ಧ ಗುಡುಗಿದ ಪಾಟೀಲ್, ಅಧಿಕಾರ ರಚನೆಗಾಗಿ ಜ್ಯಾತ್ಯಾತೀತ ಇರುವ ಜೆಡಿಎಸ್ ಮನೆ ಬಾಗಿಲಿಗೆ ಬಿಜೆಪಿ ಹೋಗುತ್ತಿದೆ ಅಂತ ವಾಗ್ದಾಳಿ ನಡೆಸಿದರು.




