ಕಲಬುರ್ಗಿ

ವೀಕೆಂಡ್ ಕರ್ಫ್ಯೂ ಹಿನ್ನೆಲೆ; ಗುಲಬರ್ಗಾ ವಿವಿ ಪರೀಕ್ಷೆ ಮುಂದೂಡಿಕೆ

ಕಲಬುರ್ಗಿ: ಕೊರೊನಾ ನಿಯಂತ್ರಣಕ್ಕಾಗಿ ಗಡಿ ಜಿಲ್ಲೆಯಲ್ಲಿ ವಿಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಗುಲಬರ್ಗಾ ವಿವಿಯ ಪರೀಕ್ಷೆಗಳನ್ನು ಮುಂದೂಡಿ ವಿವಿ ಆದೇಶ ಹೊರಡಿಸಿದೆ.

ಮಹಾರಾಷ್ಟ್ರ ಗಡಿಭಾಗವಾದ ಕಲಬುರ್ಗಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗಿನ ಜಾವ ಐದು ಗಂಟೆಯವರೆಗೆ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ. ಇದೇ ಕಾರಣಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.

7 ಮತ್ತು 8 ಹಾಗೂ 14ರಂದು ನಡೆಯುವ ಪರೀಕ್ಷೆಗಳು ರದ್ದು ಮಾಡಲಾಗಿದೆ. ಪರೀಕ್ಷೆ ರದ್ದು ಮಾಡಿ ಆದೇಶ ಹೊರಡಿಸಿದ ಗುಲಬರ್ಗಾ ವಿವಿ ಮೌಲ್ಯಮಾಪನ ಕುಲಸಚಿವ ಸೋನಾರ್ ನಂದಪ್ಪ, ವಿಕೆಂಡ್ ನಲ್ಲಿರುವ ಪರೀಕ್ಷೆಯ ದಿನಾಂಕವನ್ನು ಆಗಸ್ಟ್ 27ರ ನಂತರ ಮರು ನಿಗದಿಪಡಿಸುವದಾಗಿ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button