ಕೊಡಗುಜಿಲ್ಲಾ ಸುದ್ದಿ
ಕನ್ನಡಕ್ಕಾಗಿ ನಾವು’ ಅಭಿಯಾನ: ಮಡಿಕೇರಿಯಲ್ಲಿ ಕನ್ನಡ ಗೀತ ಗಾಯನ

ಮಡಿಕೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಒಂದು ವಾರ ಆಯೋಜಿಸಿರುವ “ಕನ್ನಡಕ್ಕಾಗಿ ನಾವು” ಅಭಿಯಾನದ ಅಂಗವಾಗಿ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು.
ಕನ್ನಡದ ಶ್ರೇಷ್ಠತೆಯನ್ನು ಸಾರುವ ಕುವೆಂಪು ಅವರ ಬಾರಿಸುವ “ಕನ್ನಡ ಡಿಂಡಿಮವ”, ಡಾ.ಕೆ.ಎಸ್.ನಿಸಾರ್ ಅಹಮ್ಮದ್ ಅವರ “ಜೋಗದ ಸಿರಿ ಬೆಳಕಿನಲ್ಲಿ” ಹಾಗೂ ಹಂಸಲೇಖರವರ ಹುಟ್ಟಿದರೆ “ಕನ್ನಡ ನಾಡಲ್ಲಿ ಹುಟ್ಟಬೇಕು” ಈ ಮೂರು ಹಾಡುಗಳನ್ನು ಏಕಕಾಲದಲ್ಲಿ ಹಾಡಲಾಯಿತು.
ನಗದ ರಾಜಸೀಟಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ವಿದ್ಯಾರ್ಥಿಗಳು, ಕನ್ನಡ ಪರ ಸಂಘ ಸಂಸ್ಥೆಯ ಸರ್ವ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.




