ಉತ್ತರ ಕನ್ನಡಜಿಲ್ಲಾ ಸುದ್ದಿ

ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಸೂಪರ್ ಸೀಡ್ ಗೆ ಕರವೇ ಆಗ್ರಹ

ಬಾಗಲಕೋಟೆ: ಆರ್ಥಿಕವಾಗಿ ದಿವಾಳಿಯಾಗಿ ಕಾರಣವಾಗಿರುವ ಮುಧೋಳ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಸೂಪರ್ ಸೀಡ್ ಮಾಡುವಂತೆ ಕರವೇ ಜಿಲ್ಲಾಧ್ಯಕ್ಷ ರಮೇಶ್ ಬದ್ನೂರ್ ಆಗ್ರಹಿಸಿದರು.

ನವನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಧೋಳ ನಗರದಲ್ಲಿ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರ್ ಆರಂಭಿಸುವಂತೆ ಆಗ್ರಹಿಸಿ ರೈತರು ಕಾರ್ಮಿಕರು ಧರಣಿ ಸತ್ಯಾಗ್ರಹ ನಡೆಸಿದ್ದಾರೆ. ರೈತರ ಹೋರಾಟಕ್ಕೆ ಕರವೇ ಬೆಂಬಲಿಸಿದ್ದು, ಸಕ್ಕರೆ ಕಾರ್ಖಾನೆ ಪುನರ್ ಆರಂಭಿಸಬೇಕು ಸದ್ಯವಿರುವ ಆಡಳಿತ ಮಂಡಳಿ ಸೂಪರ್ ಸೀಡ್ ಮಾಡಬೇಕು, ಜೊತೆಗೆ ಸರ್ಕಾರ ಕಾರ್ಖಾನೆಗೆ ಸೂಕ್ತ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ರಾಜಕಾರಣಿಗಳ ಕೈಯಲ್ಲಿ ಸಿಲುಕಿ ಆರ್ಥಿಕ ದಿವಾಳಿಯಾಗಿದೆ.ಭ್ರಷ್ಟಾಚಾರ ನಡೆದಿದ್ದು ಈ ಬಗ್ಗೆ ತನಿಖೆ ನಡೆಯಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಕರವೇ ಮುಖಂಡರು ಇದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button