ಜಿಲ್ಲಾ ಸುದ್ದಿಬಾಗಲಕೋಟೆ
ನವಿಲು ತೀರ್ಥ ಡ್ಯಾಂ ನಿಂದ ಮಲಪ್ರಭಾ ನದಿಗೆ ನೀರು: ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹ ಭೀತಿ

ಬಾಗಲಕೋಟೆ: ಮಳೆ ಹಿನ್ನೆಲೆಯಲ್ಲಿ ನವಿಲು ತೀರ್ಥ ಡ್ಯಾಂ ನಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವುದರಿಂದ ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹ ಆತಂಕ ಶುರುವಾಗಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದ ಕೆಳ ಸೇತುವೆ ಮುಳುಗಡೆ ಆಗಿದ್ದು,ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ.ಪಕ್ಕದ ಗದಗ ಜಿಲ್ಲೆಯ ಕೊಣ್ಣೂರ ಹಾಗೂ ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೆಳ ಸೇತುವೆ ಮುಳುಗಡೆಯಾಗಿದೆ.
ಹುಬ್ಬಳ್ಳಿ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯಹೆದ್ದಾರಿ ಹೊಸ ಸೇತುವೆ ಮೂಲಕ ಸಂಚಾರ ನಡೆದಿದೆ.ಇನ್ನು ಇದೇ ವರ್ಷದಲ್ಲಿ ಎರಡನೇ ಬಾರಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸೇತುವೆ ಮೇಲೆ ಮೊಳಕಾಲುದ್ದ ನೀರು ಹರಿಯುತ್ತಿದ್ದು, ನದಿ ತೀರದ ಜಮೀನಿನಲ್ಲಿದ್ದ ತೋಟಗಾರಿಕಾ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ.




