ಜಿಲ್ಲಾ ಸುದ್ದಿ

ಲಾಕ್ ಡೌನ್ ಸಡಿಲಿಕೆ ಮಾಡಿ ಉ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ನಲ್ಲಿ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಅಗತ್ಯ ವಸ್ತು ಖರೀದಿಗೆ ಜಿಲ್ಲಾಡಳಿತ ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಅವಕಾಶ ಮಾಡಿಕೊಟ್ಟಿತ್ತು. ಆದರೆ ಇದೀಗ ಜನ ದಟ್ಟಣೆ ತಪ್ಪಿಸಲು ಜನರ ಅಗತ್ಯ ವಸ್ತು ಖರೀದಿಗೆ ನಾಲ್ಕು ದಿನ ಅವಕಾಶ ಮಾಡಿಕೊಟ್ಟಿದೆ.

ಸೋಮವಾರ, ಮಂಗಳವಾರ, ಬುಧವಾರ ಮತ್ತು ಗುರುವಾರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದು, ಈ ಹಿಂದೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಇದ್ದ ಸಮಯ ವನ್ನು ಬೆಳಿಗ್ಗೆ 8 ರಿಂದ 12 ರವರೆಗೆ ಏರಿಕೆ ಮಾಡಿ ಅವಕಾಶ ಮಾಡಿಕೊಟ್ಟಿದೆ.  ಶುಕ್ರವಾರ, ಶನಿವಾರ, ಭಾನುವಾರ ಮಾತ್ರ ಸಂಪೂರ್ಣ ಲಾಕ್ ಡೌನ್ ಇರಲಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button