ಸುಂಟಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ

ಮಡಿಕೇರಿ: ಸುಂಟಿಕೊಪ್ಪ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಆಂಗ್ಲ ಮಾಧ್ಯಮ ಎಲ್.ಕೆ.ಜಿ. ಯು.ಕೆ.ಜಿ. ಮತ್ತು ಒಂದನೇ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಅತಿಥಿ ಗಣ್ಯರು ಸಾಮೂಹಿಕವಾಗಿ ಉದ್ಘಾಟನೆ ನೆರವೇರಿಸಿ ಆಂಗ್ಲ ಮಾಧ್ಯಮ ತರಗತಿಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಿವಮ್ಮ, ಉಪಾಧ್ಯಕ್ಷರಾದ ಪ್ರಸಾದ್ ಕುಟ್ಟಪ್ಪ, ಸದಸ್ಯರಾದ ರಫೀಕ್ ಖಾನ್. ಜಿನಾಷುದ್ದೀನ್, ವಸಂತಿ. ಹಸೀನ. ನಾಗರತ್ನ ಸುರೇಶ್, ಮಂಜುಳಾ. ಆಲಿಕುಟ್ಟಿ. ಗೀತಾ, ಶಿಕ್ಷಣ ಸಂಯೋಜಕರಾದ ಶಿವಲಿಂಗ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಸವರಾಜು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸೀಮಾ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪಿ.ಈ. ನಂದ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಸೌಭಾಗ್ಯ, ಪೋಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪ್ರಶಂಸೆ : “ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಿರುವುದಕ್ಕೆ ನಾಗರಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಪಾರದರ್ಶಕವಾಗಿ ಆಂಗ್ಲ ಮಾಧ್ಯಮ ವಿಭಾಗಕ್ಕೆ ನುರಿತ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಗ್ರಾಮ ಪಂಚಾಯತಿಯು ಶಿಕ್ಷಣದಲ್ಲಿ ಕ್ರಾಂತಿ ತರುವ ಉದ್ದೇಶದಿಂದ ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲದಂತೆ ಸರಕಾರಿ ಆಂಗ್ಲ ಮಾಧ್ಯಮ ಶಾಲೆಯನ್ನು ರೂಪಿಸಲಾಗುವುದು” ಎಂದು ಪಂಚಾಯತಿ ಉಪಾಧ್ಯಕ್ಷರಾದ ಪ್ರಸಾದ್ ಕುಟ್ಟಪ್ಪ ಅವರು ತಿಳಿಸಿದ್ದಾರೆ.




