ಕೊಡಗು

ಕೊಡಗಿನಲ್ಲಿ ವೀಕೆಂಡ್ ಕರ್ಫ್ಯೂ ಇದ್ದರೂ ಜನವೋ ಜನ

ಮಡಿಕೇರಿ: ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಅಲ್ಲಿಂದ ಬರುವ ಪ್ರವಾಸಿಗರಿಗೆ ಆರ್​ಟಿಪಿಸಿಆರ್​ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಕೇರಳ, ಕೊಡಗು ಗಡಿಯಲ್ಲಿ ತಪಾಸಣೆ ನಡೆಸಿ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡಬೇಕೆಂದು ರಾಜ್ಯ ಸರ್ಕಾರ ತಿಳಿಸಿದೆ. ಆದರೆ ಕೇರಳ, ಕೊಡಗು ಗಡಿಯಲ್ಲಿ ಯಾವುದೇ ತಪಾಸಣೆ ನಡೆಯುತ್ತಿಲ್ಲ ಎಂದು ತಿಳಿದುಬಂದಿದೆ.

ಕೊಡಗು ಜಿಲ್ಲೆಯ ಕುಶಾಲನಗರ ಬಳಿಯ ಕೊಪ್ಪ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ಮಾಡಲು ಆರೋಗ್ಯ ಇಲಾಖೆ ಸಿಬ್ಬಂದಿ ಕಾಣೆಯಾಗಿದ್ದು, ಕೇರಳದಿಂದ ವಾಹನಗಳು ರಾಜಾರೋಷವಾಗಿ ಆಗಮಿಸುತ್ತಿವೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button