ಕೊಡಗು

ವೀಕೆಂಡ್ ಲಾಕ್‌ಡೌನ್ ಬೇಡ; ಪ್ರವಾಸೋದ್ಯಮ ಅವಲಂಬಿತರ ಒಕ್ಕೂಟ ಪ್ರತಿಭಟನೆ

ಮಡಿಕೇರಿ: ಜಿಲ್ಲೆಯಲ್ಲಿ ಜಾರಿಯಲ್ಲಿರುವ ವೀಕೆಂಡ್ ಲಾಕ್ ಡೌನ್ ನಿಯಮವನ್ನು ಕೈಬಿಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಪ್ರವಾಸೋದ್ಯಮ ಅವಲಂಬಿತರ ಒಕ್ಕೂಟ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿದ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಸರ್ಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು.

ಒಕ್ಕೂಟದ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ ನಿರಂತರ ಲಾಕ್ ಡೌನ್ ಕ್ರಮಗಳಿಂದಾಗಿ ಜನಸಾಮಾನ್ಯರು ಮಾತ್ರವಲ್ಲದೆ ವರ್ತಕರು ಹಾಗೂ ಪ್ರವಾಸೋದ್ಯಮವನ್ನೇ ನಂಬಿ ಬದುಕುತ್ತಿರುವ ಮಂದಿ ಸಂಕಷ್ಟವನ್ನು ಎದುರಿಸುತ್ತಿದ್ದಾರೆ ಎಂದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.2 ಕ್ಕಿಂತ ಕಡಿಮೆ ಇದ್ದು, ತಕ್ಷಣ ಲಾಕ್ ಡೌನ್ ನಿಯಮವನ್ನು ಕೈಬಿಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button