ಕೊಡಗುಜಿಲ್ಲಾ ಸುದ್ದಿ

ಕೊಡಗು ಜಿಲ್ಲಾಡಳಿತದಿಂದ 73ನೇ ಗಣರಾಜ್ಯೋತ್ಸವ ಆಚರಣೆ

ಮಡಿಕೇರಿ: ಕೊಡಗು ಜಿಲ್ಲಾಡಳಿತ ವತಿಯಿಂದ 73ನೇ ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಯಿತು. ಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಧ್ವಜಾರೋಹಣ ನೆರವೇರಿಸಿ, ಪಥಸಂಚಲನವನ್ನು ವೀಕ್ಷಿಸಿ, ಗೌರವ ವಂದನೆಯನ್ನು ಸ್ವೀಕರಿಸಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಎಸ್.ರವಿಕುಶಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿ.ಪಂ. ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಸುಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಇತರರು ಪಾಲ್ಗೊಂಡಿದ್ದರು.

ಕೊಡಗು ಜಿಲ್ಲೆಯ ವಿವಿಧೆಡೆ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗಣರಾಜ್ಯೋತ್ಸವದ ಅಂಗವಾಗಿ ನಗರದಲ್ಲಿನ ಎಲ್ಲ ವೀರ ಸೇನಾನಿ ಗಳ ಪುತ್ಥಳಿಗೆ ಹೂವಿನ ಹಾರ ಹಾಕಿ ಗೌರವಿಸಲಾಯಿತು.

Spread the love

Related Articles

Leave a Reply

Your email address will not be published. Required fields are marked *

Back to top button