ಕೋಲಾರ
ಧಾರಾಕಾರ ಮಳೆಗೆ ಬೆಳೆ ಸಂಪೂರ್ಣ ಜಲಾವೃತ

ಕೋಲಾರ: ಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಜಿಲ್ಲೆಯಾದ್ಯಂತ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಳೆದ ರಾತ್ರಿ ಸುರಿದಂತಹ ಧಾರಾಕಾರ ಮಳೆಗಂತೂ ರೈತ ಬೆಳೆದ ಬೆಳೆಗಳು ಸಂಪೂರ್ಣ ಜಲಾವೃತಗೊಂಡಿವೆ.
ಕೋಲಾರ ತಾಲ್ಲೂಕಿನ ಸುಗಟೂರು ಹೋಬಳಿಯಾದ್ಯಂತ ಸುರಿದ ಧಾರಾಕಾರ ಮಳೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಂತಹ ಟೊಮ್ಯಾಟೋ, ಕ್ಯಾಪ್ಸಿಕಂ, ಕೋಸು ಬೆಳೆಗಳು ಸಂಪೂರ್ಣ ಜಲಾವೃತಗೊಂಡಿವೆ.
ಮೊದಲೇ ನಷ್ಟದಲ್ಲಿದ್ದ ರೈತ ಸಂಕುಲ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ.




