ಉತ್ತರ ಕನ್ನಡಜಿಲ್ಲಾ ಸುದ್ದಿ

ಜುಲೈ 7 ರಂದು ಶಿರಸಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕಾರವಾರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಉತ್ತರ ಕನ್ನಡದ ಶಿರಸಿ ಪಟ್ಟಣಕ್ಕೆ ಆಗಮಿಸಿ ಎಐಸಿಸಿ ನಿರ್ದೇಶನದಂತೆ ನಡೆಯಲಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ನಡೆಯಲಿರುವ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.

ಜುಲೈ 7 ರಂದು ಬೆಳಿಗ್ಗೆ 10 ಗಂಟೆಗೆ ಆಗಮಿಸುವ ಡಿ.ಕೆ. ಶಿವಕುಮಾರ್ ಶಿರಸಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಬೃಹತ್ ಸೈಕಲ್ ಜಾಥಾ ನಡೆಸಿ ಪ್ರತಿಭಟಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಕೆಪಿಸಿಸಿ ಉಸ್ತುವಾರಿಗಳು,ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಎಐಸಿಸಿ ಸದಸ್ಯರು, ಕೆಪಿಸಿಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಸೆಲ್, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಾಲೂಕು ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಪಂಚಾಯತ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಮಾಜಿ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿರುತ್ತಾರೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button