ಜಿಲ್ಲಾ ಸುದ್ದಿಮೈಸೂರು
ಸಾರಿಗೆ ಬಸ್ ಮತ್ತು ಬೈಕ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಮೈಸೂರು : ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಸ್ಕೂಟರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ನಗರದ ಮಿಲೇನಿಯಮ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದ್ದು, ಬನ್ನಿಮಂಟಪ ಬಸ್ ಡಿಪೋದಿಂದ ಗ್ರಾಮಾಂತರ ಬಸ್ ನಿಲ್ದಾಣದತ್ತ ಹೊರಟ ರಾಜಹಂಸ ಬಸ್ ಗೆ ಬೈಕ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಎನ್.ಆರ್.ಸಂಚಾರಿ ಪೊಲೀಸರು ಹಾಗೂ ಎನ್.ಆರ್.ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ವಿವರ ತಿಳಿದು ಬಂದಿಲ್ಲ. ಎನ್ ಆರ್,ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.




