ಕೊಡಗುಜಿಲ್ಲಾ ಸುದ್ದಿ

ರಸ್ತೆ ಅಭಿವೃದ್ಧಿಗೆ ಹಣ ಮೀಸಲಿಡುವಂತೆ ಸಿಎಂಗೆ ಪತ್ರ

ಕೊಡಗು : ವಿವಿಧ ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ.

ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. 2008 ರಿಂದ 2013ರ ವರೆಗೆ ಇದ್ದ ಬಿಜೆಪಿ ಸರ್ಕಾರದಲ್ಲಿ ಮಂಡಿಸಲಾದ ಎಲ್ಲಾ ಮುಂಗಡ ಪತ್ರಗಳಲ್ಲಿ ಕೊಡಗು ಜಿಲ್ಲೆಯಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ನೀಡಲಾಗಿದೆ.

ಅದೇ ರೀತಿ 2022-23ನೇ ಸಾಲಿನ ಮುಂಗಡ ಪತ್ರದಲ್ಲಿ ಕೊಡಗು ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗಾಗಿ ಕನಿಷ್ಟ 100 ಕೋಟಿ ಪ್ಯಾಕೇಜ್ ಮೀಸಲಿಡಬೇಕು. ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕು, ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮವಹಿಸಬೇಕು ಹಾಗೂ ನೂತನವಾಗಿ ರಚನೆಗೊಂಡ ಪೊನ್ನಂಪೇಟೆ ತಾಲೂಕಿಗೆ ಮಿನಿ ವಿಧಾನಸೌಧ ನಿರ್ಮಾಣ ಮಾಡಲು ರುಪಾಯಿ 10 ಕೋಟಿ ಮೀಸಲಿಡಬೇಕೆಂದು ಕೋರಿದ್ದಾರೆ.

2022-23ನೇ ಸಾಲಿನ ಬಜೆಟ್‌ನಲ್ಲಿ ಈ ಎಲ್ಲಾ ಮನವಿಗೆ ಒತ್ತು ಕೊಟ್ಟು ಘೋಷಣೆ ಮಾಡಬೇಕೆಂದು ಪತ್ರದಲ್ಲಿ ಕೆ.ಜಿ.ಬೋಪಯ್ಯ ಉಲ್ಲೇಖಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button