ನಂಜನಗೂಡು ಕಪಿಲಾ ನದಿಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನ

ಮೈಸೂರು: ತಮ್ಮ ಪ್ರೀತಿಗೆ ಪೋಷಕರು ವಿರೋಧಿಸಿದ್ದಕ್ಕೆ ಪ್ರೇಮಿಗಳು ನಂಜನಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ತೆಪ್ಪ ನಡೆಸುತ್ತಿದ್ದ ಅಂಬಿಗರು ಇಬ್ಬರನ್ನೂ ರಕ್ಷಿಸಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡಿಜ ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ, ಇಬ್ಬರಿಗೂ ನಂಜನಗೂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಬ್ಬರೂ ಚಾಮರಾಜನಗರದವರಾಗಿದ್ದು, 17 ವರ್ಷದ ಅಪ್ರಾಪ್ತೆ ಹಾಗೂ ಪಟ್ಟಣದ ಸೋಮವಾರಪೇಟೆಯ ಅಭಿ (19) ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳಾಗಿದ್ದಾರೆ.
ಅಪ್ರಾಪ್ತೆಯು ಚಾಮರಾಜನಗರ ಕಾಲೇಜೊಂದರ ವಿದ್ಯಾರ್ಥಿನಿಯಾಗಿದ್ದು, ಅಭಿ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಇಬ್ಬರ ಪ್ರೀತಿ-ಪ್ರೇಮದ ವಿಚಾರ ತಿಳಿದ ಬಾಲಕಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಪೋಷಕರು ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ನಂಜನಗೂಡಿನ ಕಪಿಲಾ ನದಿಗೆ ಹಾರಿದ್ದಾರೆ. ಇಬ್ಬರನ್ನೂ ನಂಜನಗೂಡು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




