ಮಂಡ್ಯ
ಕಾಡುಪ್ರಾಣಿ ಬೇಟೆ ವೇಳೆ ಯುವಕನಿಗೆ ಗುಂಡೇಟು

ಮಂಡ್ಯ: ಕಾಡುಪ್ರಾಣಿಯ ಬೇಟೆ ವೇಳೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಗುಂಡೇಟು ತುಗುಲಿ ಗಂಭೀರ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣದ ಮೇಲಾಪುರ ಗ್ರಾಮದಲ್ಲಿ ನಡೆದಿದೆ.
ಮೇಳಾಪುರ ಗ್ರಾಮದ ಮಾದೇಶ್ (45) ಗುಂಡೇಟಿನಿಂದ ಗಾಯಗೊಂಡಿದ್ದಾನೆ.
ಕಾಡುಹಂದಿ ಬೇಟೆಗೆ ಬಂದಿದ್ದ ಮೈಸೂರು ಜಿಲ್ಲೆಯ ಯುವಕರ ತಂಡ ಮೇಳಾಪುರದ ಜಮೀನೊಂದರಲ್ಲಿ ಕುಳಿತು ನಾಡ ಬಂದೂಕಿನಿಂದ ಗುಂಡು ಹಾರಿಸಿದಾಗ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ತಗುಲಿ ಈ ಅವಘಡ ಸಂಭವಿಸಿದೆ. ಗಾಯಾಳುವಿಗೆ ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು ನಾಡ ಬಂದೂಕು ಜಪ್ತಿ ಮಾಡಲಾಗಿದೆ. ಶ್ರೀರಂಗಪಟ್ಟಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




