ಜಿಲ್ಲಾ ಸುದ್ದಿಮೈಸೂರುರಾಜಕೀಯ

ಜನವರಿ 3ರಂದು ಮೈಸೂರಿನಲ್ಲಿ ಮೇಕೆದಾಟು ಪೂರ್ವಭಾವಿ ಸಭೆ: ಶಾಸಕ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಜನವರಿ 3 ರಂದು ಮೈಸೂರಿನಲ್ಲಿ ಈ ಸಂಬಂಧ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಪೂರ್ವಭಾವಿ ಸಭೆ ಬಗ್ಗೆ ವರುಣ ಕ್ಷೇತ್ರ, ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಹಿರಿಯ ಮುಖಂಡರು ಮತ್ತು ಚುನಾಯಿತ ಪ್ರತಿನಿಧಿಗಳ ಜೊತೆ ಯತೀಂದ್ರ ಸಿದ್ಧರಾಮಯ್ಯ ಚರ್ಚಿಸಿದರು. ಮೈಸೂರಿನ ಗನ್ ಹೌಸ್ ಬಳಿ ಇರುವ ಬಸವೇಶ್ವರ ಸರ್ಕಲ್ ನಿಂದ ಮೆರವಣಿಗೆ ಮೂಲಕ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳು ಮೂಲಕ ಈ ಸಭೆಯನ್ನು ಯಶಸ್ವಿಗೊಳಿಸಲು ಯತೀಂದ್ರ ಸಿದ್ಧರಾಮಯ್ಯ ಕರೆ ನೀಡಿದರು.

ಮೇಕೆದಾಟು ಪಾದಯಾತ್ರೆ ಸಂಬಂಧ ಜನವರಿ 3ರಂದು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಸಭೆಗೆ ಐದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button