ಹೆಚ್ ಡಿ ಕುಮಾರಸ್ವಾಮಿ ಭೇಟಿಯಾದ ಸಚಿವ ಆರ್ ಅಶೋಕ್

ರಾಮನಗರ: ಕಲಬುರಗಿ ಪಾಲಿಕೆ ಚುನಾವಣೆ ಅತಂತ್ರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಜೆಡಿಎಸ್ ಬೆಂಬಲ ಕೊಡುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ.
ಬಿಡದಿಯ ಕೇತುಗಾನಹಳ್ಳಿ ತೋಟದ ಮನೆಯಲ್ಲಿ ಮಾಜಿ ಸಿಎಂ ಭೇಟಿಯಾಗಿ ಚರ್ಚಿಸಿದ್ದಾರೆ. ನಂತರ ಮಾತನಾಡಿದ ಅವರು, ಕಲಬುರ್ಗಿ ಪಾಲಿಕೆ ಚುನಾವಣೆಗೆ ನಮ್ಮ ಪಕ್ಷಕ್ಕೆ ಬೆಂಬಲ ಕೊಡುವಂತೆ ಮಾತನಾಡಿದ್ದೇನೆ. ಇದಕ್ಕೆ ಕುಮಾರಸ್ವಾಮಿ ಅವರು ಕೂಡ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಪಾಲಿಕೆ ಬೆಂಬಲದ ಬಗ್ಗೆ ಕುಮಾರಸ್ವಾಮಿ ಅವರು ಸೋಮವಾರ ಸದನದಲ್ಲಿ ಚರ್ಚಿಸೊಣ ಎಂದಿದ್ದಾರೆ. ದೇವೇಗೌಡರ ಜೊತೆಗೆ ಚರ್ಚಿಸಿ ಒಂದೊಳ್ಳೆ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ
ಡೊಡ್ಡ ಬಳ್ಳಾಪುರದ ಚುನಾವಣೆ ಬಗ್ಗೆ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ. ಹಾಗೆಯೇ ಕಲಬುರಗಿ ಪಾಲಿಕೆ ಚುಕ್ಕಾಣಿಗೆ ಜೆಡಿಎಸ್- ಕಾಂಗ್ರೆಸ್‌ಗೆ ಬೆಂಬಲ ಕೊಟ್ಟಿದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಾಗೇನು ಇಲ್ಲ, ಕಾಂಗ್ರೆಸ್‌ನಲ್ಲೇ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರಲ್ಲೇ ಒಮ್ಮತವಿಲ್ಲ. ಮೇಯರ್ ಪಟ್ಟದ ಡಿಮ್ಯಾಂಡ್ ಕೂಡ ಚರ್ಚೆಯಾಗಿಲ್ಲ ಎಂದಿದ್ದಾರೆ.




