Breaking Newsಜಿಲ್ಲಾ ಸುದ್ದಿಮೈಸೂರು

ಸಿಎಂ ಬದಲಾವಣೆ ಬಗ್ಗೆ ಪ್ರಧಾನಿ, ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಕೈಗೊಳ್ಳಲಿದ್ದಾರೆ: ಸಚಿವ ಎಸ್ ಟಿ ಸೋಮಶೇಖರ್​

ಮೈಸೂರು: ಸಿಎಂ ಬದಲಾವಣೆ ಬಗ್ಗೆ ಪ್ರಧಾನಮಂತ್ರಿ ಹಾಗೂ ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಹೇಳಿದರು.

ರೈತರ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರ ಹೈಕಮಾಂಡ್‌ ನಿರ್ಧಾರಕ್ಕೆ ಬಿಟ್ಟಿದ್ದು. ಆ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಕುರಿತು ಮಾತನಾಡಿ, ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ. ಕಬಿನಿ ಜಲಾಶಯಕ್ಕೆ ಒಳಹರಿವು ಕಡಿಮೆ ಆಗಿದೆ. ಈಗ 30 ಸಾವಿರ ಕ್ಯೂಸೆಕ್ ಹೊರಹರಿವು ಇದೆ. ಸುಮಾರು 60-70 ಸಾವಿರ ಕ್ಯೂಸೆಕ್ ನೀರು ಹರಿದರೆ ಮಾತ್ರ ಪ್ರವಾಹ ಆಗುತ್ತದೆ. ಕೆಆರ್‌ಎಸ್‌ ಅಣೆಕಟ್ಟೆಯಿಂದ ಒಂದೂವರೆ ಲಕ್ಷ ಕ್ಯೂಸೆಕ್ ಹೊರಹರಿವು ಇದ್ದರೆ ತೊಂದರೆ ಆಗುತ್ತದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button