ಚಿಕ್ಕಮಗಳೂರುಜಿಲ್ಲಾ ಸುದ್ದಿ

ಎಂಎಲ್ಸಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ

ಚಿಕ್ಕಮಗಳೂರು: ಎಂಎಲ್ಸಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ನೂರಾರು ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿಯತ್ತ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಶೃಂಗೇರಿ ಶಾಸಕ ಟಿ ಡಿ ರಾಜೇಗೌಡ, ಪಕ್ಷದ ಅಧ್ಯಕ್ಷ ಅಂಶುಮಂತ್, ಮಾಜಿ ಸಚಿವ ಸಗೀರ್ ಅಹ್ಮದ್ ಮುಂತಾದವರು ಜತೆಗಿದ್ದರು. ಹಿಂದೆ ಎಂಎಲ್ಸಿಯಾಗಿದ್ದ ಗಾಯತ್ರಿ ಶಾಂತೇಗೌಡ, ಇನ್ನೊಮ್ಮೆ ಸೋಲು ಕಂಡಿದ್ದರು ಈಗ ಮತ್ತೆ ಮೂರನೇ ಬಾರಿ ಸ್ಪರ್ಧಿಸುತ್ತಿದ್ದಾರೆ.

ಇಂದಿರಾಗಾಂಧಿ ಜನ್ಮದಿನ:

ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆಗೆ ಮೊದಲು ಪಕ್ಷದ ಕಚೇರಿಯಲ್ಲಿ ದಿ.ಇಂದಿರಾಗಾಂಧಿ ಜನ್ಮದಿನಾಚರಣೆ ಪ್ರಯುಕ್ತ ಇಂದಿರಾ ಸ್ಮರಣೆ ಕಾರ್ಯಕ್ರಮ ನಡೆಯಿತು. ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button