ಮೈಸೂರು
ಪೊಲೀಸ್ ಠಾಣೆಯಲ್ಲೇ ತಂದೆಯ ಹುಟ್ಟುಹಬ್ಬ ಆಚರಿಸಿದ ಇನ್ಸ್ಪೆಕ್ಟರ್

ಮೈಸೂರು ; ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ತಂದೆಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸುವ ಮೂಲಕ ಪೊಲೀಸ್ ಠಾಣೆಯನ್ನೇ ಮನೆ ಮಾಡಿಕೊಂಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಈ ಯಡವಟ್ಟಿನ ಘಟನೆ ನಡೆದಿದೆ. ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ತಮ್ಮ ತಂದೆಯ ಬರ್ತ್ಡೆಯನ್ನು ತಾವು ಅಧಿಕಾರದಲ್ಲಿರುವ ಠಾಣೆಯಲ್ಲಿ ಆಚರಿಸಿದ್ದಾರೆ.
ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರ ತಂದೆ ನಂಜುಡೇಗೌಡ ಅವರ 75ನೇ ವರ್ಷದ ಹುಟ್ಟುಹಬ್ಬ ಆಚರಣೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಭರ್ಜರಿಯಾಗಿ ನಡೆದಿದೆ.
ಠಾಣೆಯಲ್ಲಿ ಪತ್ನಿ ಮತ್ತು ಮಕ್ಕಳ ಜೊತೆ ತಂದೆಯ ಬರ್ತ್ಡೆಯನ್ನು ಇನ್ಸ್ಪೆಕ್ಟರ್ ಬಾಲಕೃಷ್ಣ ಆಚರಿಸಿದ್ದಾರೆ. ಇನ್ಸ್ಪೆಕ್ಟರ್ ಬಾಲಕೃಷ್ಣ ವರ್ತನೆಗೆ ಈಗ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ಕೇಳಿಬಂದಿದೆ.




