ಮೈಸೂರು
ಜಿಟಿ ಜಿಟಿ ಮಳೆಯಲ್ಲೂ ಚಾಮುಂಡಿ ದರ್ಶನ
ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಆಷಾಢ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ. ಆದ್ದರಿಂದ ಗುರುವಾರವೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಿರುವುದು ಕಂಡು ಬಂತು.
ಜಿಟಿ ಜಿಟಿ ಸುರಿಯುವ ಮಳೆಯನ್ನು ಲೆಕ್ಕಿಸದೆ ಮುಂಜಾನೆಯೇ ಭಕ್ತರು ಬೆಟ್ಟದತ್ತ ಆಗಮಿಸಿ ದೇಗುಲದ ಬಳಿ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕಾಗಿ ಗಂಟೆಗಟ್ಟಲೆ ಕಾದು ಪಡೆದರು.




