
ಮೈಸೂರು: ಇಲ್ಲಿನ ಇತಿಹಾಸ ಪ್ರಸಿದ್ದ ಚಾಮುಂಡಿಬೆಟ್ಟಕ್ಕೆ ಇಂದಿನಿಂದ 3 ದಿನಗಳವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.
ಮೈಸೂರು ಮಾತ್ರವೇ ಅಲ್ಲ, ಬೇರೆ ಕಡೆಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಈ ವೇಳೆ ಕೋರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಾಧ್ಯವಾಗುವುದಿಲ್ಲ ಎಂದು ಜಿಲ್ಲಾಡಳಿತ ಭಕ್ತರಿಗೆ ಪ್ರವೇಶವನ್ನು ನಿಷೇಧಿಸಿದೆ. ಆದರೆ ಬೆಟ್ಟದ ಮೇಲೆ ವಾಸಿಸುವ ನಿವಾಸಿಗಳಿಗೆ ಪ್ರವೇಶ ಇರುತ್ತದೆ.
ಶನಿವಾರ ಹಾಗೂ ಭಾನುವಾರ ವಾರಾಂತ್ಯ ಲಾಕ್ ಡೌನ್ ಇರುತ್ತದೆ. ಈ ಕಾರಣದಿಂದ ಇನ್ನು 3 ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಚಾಮುಂಡಿಬೆಟ್ಟದ ತಾವರೆಕಟ್ಟೆ ಗೇಟ್ ಹಾಗೂ ಹೊಸಹುಂಡಿ ಗೇಟ್ ಬಳಿ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸ್ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.




