ಮೈಸೂರು
ಪರೀಕ್ಷೆಗೆ ಹೆದರಿ ಪಿಎಚ್ಡಿ ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು: ಪರೀಕ್ಷೆ ಒತ್ತಡಕ್ಕೆ ಹೆದರಿ ಪಿಎಚ್ಡಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ನಗರದ ಸರಸ್ವತಿಪುರಂನಲ್ಲಿ ಈ ಘಟನೆ ನಡೆದಿದ್ದು, ಪರೀಕ್ಷೆ ಒತ್ತಡವೇ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದ್ದು, ರಶ್ಮಿ (29) ಮೃತ ವಿದ್ಯಾರ್ಥಿನಿ. ಚಾಮರಾಜನಗರ ಮೂಲದ ರಶ್ಮಿ ಸರಸ್ವತಿಪುರಂ 9ನೇ ಮೇನ್ನಲ್ಲಿರುವ ಪಿಜಿಯಲ್ಲಿ ವಾಸ್ತವ್ಯ ಹೂಡಿದ್ದರು.
ಎಂಎಸ್ಸಿ ಕೆಮಿಸ್ಟ್ರಿ ಮುಗಿಸಿ ಪಿಎಚ್ ಡಿ ಮಾಡುತ್ತಿದ್ದ ರಶ್ಮಿಯು ಜೆಎಸ್ಎಸ್ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಮಿಸ್ಟ್ರಿ ವಿಚಾರದಲ್ಲಿ ಪಿಎಚ್ಡಿ ಮಾಡುತ್ತಿದ್ದರು.
ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿರಲಿಲ್ಲ ಎಂದು ಹೇಳಲಾಗಿದ್ದು, ಇದರಿಂದ ಒತ್ತಡಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಭಂದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




