ಮೈಸೂರು

ಶಾಲೆ ಆರಂಭಕ್ಕೂ ಮುನ್ನ ಶಿಕ್ಷಕರಿಗೆ ಕೊರೋನಾ ಲಸಿಕೆ ಕಡ್ಡಾಯ: ಸಚಿವ ಸೋಮಶೇಖರ್

ಮೈಸೂರು: ಶಾಲೆಗಳ ಆರಂಭಕ್ಕೂ ಮುನ್ನ ಎಲ್ಲಾ ಶಿಕ್ಷಕರಿಗೆ ಕಡ್ಡಾಯವಾಗಿ ಕೊರೋನಾ ಲಸಿಕೆ ನೀಡಬೇಕು ಎಂದು ಉಸ್ತುವಾರಿ ಸಚಿವ ಎಸ್​ ಟಿ ಸೋಮಶೇಖರ್ ಸೂಚನೆ ನೀಡಿದ್ದಾರೆ.

ಮಂಗಳವಾರ ಜಿಪಂ ಕಚೇರಿ ಸಭಾಂಗಣದಲ್ಲಿ ಕೋವಿಡ್ ಸ್ಥಿತಿಗತಿ ಮತ್ತು ಶಾಲೆಗಳು ಆರಂಭಕ್ಕೂ ಮುನ್ನ ಮಾಡಿಕೊಂಡಿರುವ ಸಿದ್ದತೆಗಳ ಬಗ್ಗೆ ಸಭೆ ನಡೆಸಿದ ಸಚಿವರು, ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲೆಗಳಲ್ಲಿ ಒಟ್ಟು 9088 ಶಿಕ್ಷಕರು ಇದ್ದಾರೆ. ಪೈಕಿ 5875 ಶಿಕ್ಷಕರು ಎರಡೂ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ‌. 2417 ಶಿಕ್ಷಕರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದರು.

796 ಶಿಕ್ಷಕರು ಮಾತ್ರ ಇನ್ನೂ ಲಸಿಕೆ ಪಡೆದಿಲ್ಲ.. ಜಿಲ್ಲೆಯಲ್ಲಿ ಸಾಕಷ್ಟು ಡೋಸ್ ಲಸಿಕೆ ಲಭ್ಯವಿದೆ‌. ಶಾಲೆ ಆರಂಭಕ್ಕೂ ಈ ಎಲ್ಲಾ ಶಿಕ್ಷಕರಿಗೂ ಲಸಿಕೆ ನೀಡುವಂತೆ‌ ಉಸ್ತುವಾರಿ ಸಚಿವರು ಸೂಚನೆ ನೀಡಿದರು.

ಕೇಂದ್ರ ಸಮಿತಿಯ ಶಿಫಾರಸಿನಂತೆ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಮಕ್ಕಳ ಮೇಲೆ ಹೆಚ್ಚಿನ ನೀಗಾ ವಹಿಸಬೇಕು. ಪೋಷಕರಿಗೆ ಮಕ್ಕಳಿಗೆ ಆತ್ಮ ಸ್ಥೈರ್ಯ ತುಂಬಬೇಕು ಎಂದರು.

ಸಭೆಯಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಹರ್ಷವರ್ಧನ್, ಆರ್. ಧರ್ಮಸೇನ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಮಹಾಪೌರರಾದ ಅನ್ವರ್ ಬೇಗ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿಯ ಸಿಇಒ ಎ.ಎಂ.ಯೋಗೀಶ್, ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ನಗರ ಪಾಲಿಕೆಯ ಆಯುಕ್ತ ಜಿ.ಲಕ್ಷ್ಮಿಕಾಂತ್ ರೆಡ್ಡಿ, ಡಿಡಿಪಿಐ, ಡಿಡಿಪಿಯು, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರು, ಮೈಸೂರು ವಿವಿ ಕುಲಸಚಿವರು, ಮುಕ್ತ ವಿವಿ ಕುಲಸಚಿವರು ಇದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button