ಮೈಸೂರು

ಮೈಸೂರು ಪಾಲಿಕೆ 104 ಕಾರ್ಮಿಕರ ಹಠಾತ್ ವಜಾ

ಮೈಸೂರು: ಮೈಸೂರು ಮಹಾನಗರಪಾಲಿಕೆಯಲ್ಲಿ ಹತ್ತಾರು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ 104 ಪೌರಕಾರ್ಮಿಕರನ್ನು ಶುಕ್ರವಾರ ಹಠಾತ್ ವಜಾ ಮಾಡಲಾಗಿದೆ.

ಇದನ್ನು ಖಂಡಿಸಿ ಪೌರಕಾರ್ಮಿಕರು ಪಾಲಿಕೆ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದು, ತಮ್ಮ ಸಂಘದ ಅಧ್ಯಕ್ಷ ಪಳನಿಸ್ವಾಮಿ ನೇತೃತ್ವದಲ್ಲಿ ಅನ್ಯಾಯಕ್ಕೆ ಒಳಗಾದ ಪೌರಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿದ್ದಾರೆ. ನಗರಪಾಲಿಕೆ ಆಯುಕ್ತರು ಲಭ್ಯವಾಗುತ್ತಿಲ್ಲ. ಸಕಾರಣವೇ ಇಲ್ಲದೇ ಈ ರೀತಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನ್ಯಾಯ ದೊರೆಯುವವರೆಗೂ ಹೋರಾಟ ಮಾಡಲಾಗುವುದು ಎಂದು ಪಳನಿಸ್ವಾಮಿ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button