Latestಜಿಲ್ಲಾ ಸುದ್ದಿಮೈಸೂರು

ಕಳ್ಳತನವಾದ ಮೊಬೈಲ್ ಹುಡುಕಿಕೊಡುವಂತೆ ಸಿಎಂ ಬೊಮ್ಮಾಯಿಗೆ ಪತ್ರ

ಮೈಸೂರು : ಕಳ್ಳತನವಾದ ಮೊಬೈಲ್ ಹುಡುಕಿಸಿಕೊಡುವಂತೆ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾತಿ ಅವರಿಗೆ ಪತ್ರ ಬರೆದಿರುವ ವಿಚಿತ್ರ ಘಟನೆ ಮೈಸೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಪಿರಿಯಾಪಟ್ಟಣ ತಾಲೂಕಿನ ಕುಂದನಹಳ್ಳಿ ಜನತಾ ಬಡಾವಣೆಯ ನಿವಾಸಿ ಶಿವಣ್ಣ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಆಗಸ್ಟ್ 28 ರಂದು ಬೆಳಗ್ಗೆ 10.20ರ ಸಮಯದಲ್ಲಿ ಗ್ರಾಮಾಂತರ ಬಸ್ ನಿಲ್ದಾಣದಿಂದ ವುಡ್ ಲ್ಯಾಂಡ್ಸ್ ಚಿತ್ರಮಂದಿರದ ಕಡೆ ನಡೆದುಕೊಂಡು ಹೋಗುವಾಗ ವ್ಯಕ್ತಿಯೊಬ್ಬ ಮೊಬೈಲ್ ಕಿತ್ತುಕೊಂಡು ಹೋಗಿದ್ದಾನೆ. ಬಳಿಕ ತಾನು ಮೊಬೈಲ್ ಹುಡುಕಿಕೊಡುವಂತೆ ಲಷ್ಕರ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇನ್ನೂ ಮೊಬೈಲ್ ಹುಡುಕಿಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಪೊಲೀಸ್ ಕಮೀಷನರ್ ಗೆ ಪತ್ರ ಬರೆದಿದ್ದರೂ ಏನೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಇನ್ನಾದರೂ ಆರೋಪಿಯನ್ನು ಬಂಧಿಸಿ, ಮೊಬೈಲ್ ಹುಡುಕಿಸಿಕೊಡಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button