ಜಿಲ್ಲಾ ಸುದ್ದಿಮೈಸೂರು
ಅರಮನೆಯೊಳಗೆ ಧಾರ್ಮಿಕ ಪೂಜೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಮೈಸೂರು ; ದಸರಾ ಮಹೋತ್ಸವ ಹಿನ್ನೆಲೆ ಅರಮನೆಯೊಳಗೆ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರುವುದರಿಂದ ಅಕ್ಟೋಬರ್ 1, 7, 14, 15, ಮತ್ತು 31 ರಂದು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಅರಮನೆ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.
ಅ. 1ರಂದು ಶುಕ್ರವಾರ ಸಿಂಹಾಸನ ಜೋಡಣೆ ಪ್ರಯುಕ್ತ ಬೆಳಗ್ಗೆ 10 ರಿಂದ 1 ರವರೆಗೆ ಪ್ರವೇಶ ಇರುವುದಿಲ್ಲಾ. ಮತ್ತು ಅ. 07ರಂದು ಗುರುವಾರ ಖಾಸಗಿ ದರ್ಬಾರ್ನಲ್ಲಿ ರಾಜವಂಶಸ್ಥರ ಧಾರ್ಮಿಕ ಪೂಜೆಯ ಪ್ರಯುಕ್ತ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಪ್ರವೇಶ ಇರುವುದಿಲ್ಲ.
ಅಲ್ಲದೇ ಅಕ್ಟೋಬರ್ 14ರಂದು ಗುರುವಾರ ಆಯುಧ ಪೂಜೆ ಪ್ರಯುಕ್ತ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಪ್ರವೇಶ ಇರುವುದಿಲ್ಲ. ಮತ್ತು ಅ.15ರಂದು ಶುಕ್ರವಾರ ವಿಜಯ ದಶಮಿಯ ಪ್ರಯುಕ್ತ ಸಂಪೂರ್ಣ ದಿನ ಪ್ರವೇಶವಿರುವುದಿಲ್ಲ.
ಅ. 31ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಸಿಂಹಾಸನ ವಿಸರ್ಜನೆ ಪ್ರಯುಕ್ತ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅರಮನೆ ಆಡಳಿತ ಪ್ರಕಟಣೆ ಹೊರಡಿಸಿದ್ದಾರೆ.




