Latestಕಲಬುರ್ಗಿಜಿಲ್ಲಾ ಸುದ್ದಿ
ಮಹಾರಾಷ್ಟ್ರ ಗಡಿಯಲ್ಲಿ ಬಿಗಿ ಭದ್ರತೆ : ಗಲಾಟೆ ಮಾಡಿ ಕರ್ನಾಟಕ ಪ್ರವೇಶ ಮಾಡುತ್ತಿರುವ ಪ್ರಯಾಣಿಕರು

ಕಲಬುರ್ಗಿ: ಕೊರೊನಾ ಹೆಚ್ಚಳವಾದ ಹಿನ್ನಲೆ ಮಹಾರಾಷ್ಟ್ರ- ಕರ್ನಾಟಕ ಗಡಿಗಳಲ್ಲಿ ಜಿಲ್ಲಾಢಳಿತ ಬಿಗಿ ಭದ್ರತೆ ಕೈಗೊಂಡಿದ್ದು, ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರು ಕರ್ನಾಟಕ ಪ್ರವೇಶ ನೀಡುವಂತೆ ಚಕ್ ಪೊಸ್ಟ್ ಗಳಲ್ಲಿ ಗಲಾಟೆ ಮಾಡುತ್ತಿದ್ದಾರೆ.
ಕಲಬುರ್ಗಿ ಜಿಲ್ಲೆಯ ಗಡಿಗಳಲ್ಲಿ ಜಿಲ್ಲಾಡಳಿತ ಬಿಗಿ ಭದ್ರತೆ ಕೈಗೊಂಡಿದೆ. ಅಫಜಲಪೂರ ತಾಲೂಕಿನ ಬಳ್ಳೂರಗಿ ಚೆಕ್ ಪೋಸ್ಟ್ ನಲ್ಲಿ ಮಹಾರಾಷ್ಟ್ರದ ಪ್ರಯಾಣಿಕರು ಗಲಾಟೆ ಮಾಡುತ್ತಿದ್ದಾರೆ ಎಂದು ಸಿಬ್ಬಂದಿ ಹೇಳುತ್ತಿದ್ದಾರೆ.
ಆರ್ ಟಿಪಿಸಿಆರ್ ವರದಿ ಇಲ್ಲದಿದ್ರು ಜಿಲ್ಲೆಗೆ ಪ್ರವೇಶ ನೀಡುವಂತೆ ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ಜೊತೆ ಪ್ರಯಾಣಿಕರು ಗಲಾಟೆ ಮಾಡುತ್ತಿದ್ದಾರೆ. ಎರಡು ಡೋಸ್ ಲಸಿಕೆ ಪಡೆದಿದ್ದೆವೆ ನಮಗೆ ಪ್ರವೇಶ ಕೋಡಿ ಎಂದು ಗಲಾಟೆ ಮಾಡುತ್ತಿರುವ ಜನ, ಎಷ್ಟೇ ಹೇಳಿದ್ರು ಕೇಳದೆ ಕೊನೆಗೆ ಬ್ಯಾರಿಕೇಡ್ ಕಿತ್ತು ಹಾಕಿ ಜಿಲ್ಲೆಯ ಒಳ ಹೋಗಿದ್ದಾರೆ ಎಂದು ಸಿಬ್ಬಂದಿ ಹೇಳಿದ್ದಾರೆ.



